ಕೋಲಾರ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆ

Public TV
1 Min Read

ಕೋಲಾರ: ಬಿಸಿಲಿನಿಂದ ಬಸವಳಿದಿದ್ದ ಕೋಲಾರ (Kolar) ಜಿಲ್ಲೆಗೆ ಮಳೆಯ ಸಿಂಚನವಾಗಿದೆ. ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆಯಾಗಿದ್ದು (Rain), ಬಿಸಿಗಾಳಿ, ಒಣಹವೆಗೆ ಬರಡಾಗಿದ್ದ ಭೂಮಿಗೆ ಜೀವ ಬಂದಂತಾಗಿದೆ.

ಕಳೆದ 6 ತಿಂಗಳಿನಿಂದ ಮಳೆ ಕಾಣದೆ ಭೂಮಿ ಬರಡಾಗಿತ್ತು. ಇದೀಗ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ. ಮಳೆಯ ಪರಿಣಾಮ ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮಟೋ ಮಂಡಿ ಶೆಡ್ ಉರುಳಿದೆ. ಘಟನೆಯಿಂದ 50 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ಮಳೆ ಸುರಿದಿದ್ದು, ಬೊಲೆರೋ ವಾಹನವೊಂದು ಮಳೆಗೆ ಜಖಂ ಆಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದ ಸುತ್ತಲೂ ಸಾಧಾರಣ ಮಳೆಯಾಗಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ವರುಣ ಕೃಪೆ ತೋರಿದ್ದಾನೆ. ಇದನ್ನೂ ಓದಿ: ಪೆನ್‍ಡ್ರೈವ್ ಪ್ರಕರಣದಲ್ಲಿ ಷಡ್ಯಂತ್ರ- ಡಿಕೆಶಿ ವಿರುದ್ಧ ದೇವರಾಜೇಗೌಡ ನೇರ ಆರೋಪ

ಮೇ 6 ರಿಂದ ಮೇ 10 ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ. ಮೇ 6ರಂದು ಕರಾವಳಿ ಭಾಗದಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದರೆ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗಲಿದೆ. ಅದರಲ್ಲೂ ಹಳೇ ಮೈಸೂರು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.  ಇದನ್ನೂ ಓದಿ: ಮಂಡ್ಯದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ಭ್ರೂಣಹತ್ಯೆ ದಂಧೆ: ದಂಪತಿ ಅರೆಸ್ಟ್

Share This Article