ಚೀನಾದಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪನ – ದೆಹಲಿಯಲ್ಲೂ ಕಂಪಿಸಿದ ಭೂಮಿ, ಬೆಚ್ಚಿಬಿದ್ದ ಜನ

Public TV
1 Min Read

ನವದೆಹಲಿ: ಚೀನಾದ ದಕ್ಷಿಣ ಕ್ಸಿನ್‌ಜಿಯಾಂಗ್‌ನಲ್ಲಿ (Southern part of China’s) ಸೋಮವಾರ ತಡರಾತ್ರಿ 7.2 ತೀವ್ರತೆಯ ಪ್ರಬಲ ಭೂಕಂಪನ (Earthquake) ಸಂಭವಿಸಿದ್ದು, ದೆಹಲಿಯಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಸದ್ಯ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಆಸ್ತಿಪಾಸ್ತಿ ಹಾನಿಯಾದ ಬಗ್ಗೆಯೂ ವರದಿಯಾಗಿಲ್ಲ.

ರಿಕ್ಟರ್‌ ಮಾಪಕದಲ್ಲಿ ಭೂಕಂಪನ ತೀವ್ರತೆ 7.2 ಎಂದು ಗುರುತಿಸಲಾಗಿದ್ದು, ಸುಮಾರು 80 ಕಿಮೀ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: ‘ಜೈ ಶ್ರೀರಾಮ್‌ ಇಂಡಿಯಾ’: ವಿಶೇಷ ಪೋಸ್ಟ್‌ ಮೂಲಕ ರಾಮಮಂದಿರ ಪ್ರಾಣ ಪ್ರತಿಷ್ಠೆ ಆಚರಿಸಿದ ಡೇವಿಡ್‌ ವಾರ್ನರ್‌

ಇದೇ ಜನವರಿ 11ರಂದು ಅಫ್ಘಾನಿಸ್ತಾನದಲ್ಲಿ 6.1 ತೀವ್ರತೆ ಭೂಕಂಪ ಸಂಭವಿಸಿದ ನಂತರ ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ಲಘು ಭೂಕಂಪ ಸಂಭವಿಸಿದ್ದವು. ಕಾಬೂಲ್‌ನಿಂದ ಈಶಾನ್ಯಕ್ಕೆ 241 ಕಿಮೀ ದೂರದಲ್ಲಿ ಕೇಂದ್ರ ಬಿಂದು ಪತ್ತೆಯಾಗಿತ್ತು. ಪಾಕಿಸ್ತಾನದಲ್ಲೂ ಭೂಮಿ ಕಂಪಿಸಿದ ಅನುಭವವಾಗಿತ್ತು. ಇದನ್ನೂ ಓದಿ: ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಂಭ್ರಮದಲ್ಲಿ ರಿಷಬ್ ಶೆಟ್ಟಿ ದಂಪತಿ

47 ಮಂದಿ ಜೀವಂತ ಸಮಾಧಿ: ಸೋಮವಾರ ಬೆಳಿಗ್ಗೆ ಈಶಾನ್ಯ ಚೀನಾದ ಗುಡ್ಡಗಾಡು ಹಾಗೂ ಪರ್ವತ ಶ್ರೇಣಿಯಲ್ಲಿ ಭೂಕಂಪ ಸಂಭವಿಸಿದ್ದು, 47 ಮಂದಿ ಜೀವಂತ ಸಮಾಧಿಯಾಗಿದ್ದಾರೆ. 200ಕ್ಕೂ ಹೆಚ್ಚು ಮಂದಿಯನ್ನು ತುರ್ತಾಗಿ ಸ್ಥಳಾಂತರಿಸಲಾಗಿದೆ ಎಂದು ಅಧಿಕೃತ ಪ್ರಸಾರಸಂಸ್ಥೆಗಳು ವರದಿ ಮಾಡಿವೆ. ಅಲ್ಲದೇ ದಿಢೀರ್‌ ಮಳೆ ಹಿನ್ನೆಲೆಯಲ್ಲಿ ಚೀನಾದಲ್ಲಿ ಪ್ರಕೃತಿ ವಿಕೋಪಗಳು ಸಂಭವಿಸುತ್ತಿರುವುದಾಗಿ ಮೂಲಗಳು ತಿಳಿಸಿವೆ.

Share This Article