ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಗೆ ಜೀವ ಬೆದರಿಕೆ – ಆರೋಪಿ ಅರೆಸ್ಟ್

By
1 Min Read

ಮುಂಬೈ: ಮಹಾರಾಷ್ಟ್ರ (Maharashtra) ಸಿಎಂ ಏಕನಾಥ್ ಶಿಂಧೆ (Eknath Shinde) ಮತ್ತು ಅವರ ಪುತ್ರ ಸಂಸದ ಶ್ರೀಕಾಂತ್ ಶಿಂಧೆ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು (Police) ಪುಣೆಯ 19 ವರ್ಷದ ವಿದ್ಯಾರ್ಥಿಯೊಬ್ಬನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಶುಭಂ ವಾರ್ಕಾಡ್ ಎಂದು ಗುರುತಿಸಲಾಗಿದೆ. ಈತ ನಾಂದೇಡ್ ಜಿಲ್ಲೆಯವನಾಗಿದ್ದು, ಪುಣೆಯ ಕಾಲೇಜ್ ಒಂದರಲ್ಲಿ ಓದುತ್ತಿದ್ದ. ಏಕನಾಥ್ ಶಿಂಧೆ ಮತ್ತು ಶ್ರೀಕಾಂತ್ ಶಿಂಧೆ ಅವರಿಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಜೀವ ಬೆದರಿಕೆ ಹಾಕಿದ್ದ ಎಂದು ಪೊಲೀಸರು ಆರೋಪಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಸರ್ಕಾರದ ಅನ್ಯಾಯಕ್ಕೆ ಬಿಜೆಪಿ ಸಹಕಾರ, ಕನ್ನಡಿಗರಿಗೆ ಮಾಡುವ ದ್ರೋಹ: ಸಿಎಂ ಸಿದ್ದರಾಮಯ್ಯ

ಫೆ.11 ರಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಅವರ ಪುತ್ರ ಶ್ರೀಕಾಂತ್ ಶಿಂಧೆ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಕೊಲೆ ಬೆದರಿಕೆ ಬಂದಿತ್ತು. ಇದರಿಂದ ಕಾರ್ಯಪ್ರವೃತ್ತರಾದ ಪೊಲೀಸರು ತಕ್ಷಣ ಆರೋಪಿಯ ಪತ್ತೆಗೆ ಬಲೆ ಬೀಸಿದ್ದರು. ಜಿ-ಮೇಲ್ ಹಾಗೂ ಐಪಿ ಅಡ್ರೆಸ್ ಮೂಲಕ ಆತನನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 506(2) ಅಡಿ ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ. ಬೆದರಿಕೆಯ ಹಿಂದಿನ ಉದ್ದೇಶವನ್ನು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೆ ಸುರಂಗನೂ ಬೇಡ, ಫ್ಲೈಓವರ್ ಬೇಡ.. ಮೊದಲು ನೀರು ಕೊಡಿ: ಎಸ್‌.ಆರ್.ವಿಶ್ವನಾಥ್

Share This Article