ಗೆಳತಿಯನ್ನು ಸೂಟ್‌ಕೇಸ್‌ನಲ್ಲಿ ಬಚ್ಚಿಟ್ಟು ಹಾಸ್ಟೆಲ್‌ಗೆ ತಂದು ಸಿಕ್ಕಿಬಿದ್ದ ಯುವಕ!

Public TV
1 Min Read

ಚಂಢೀಗರ್: ವಿದ್ಯಾರ್ಥಿಯೊಬ್ಬ ತನ್ನ ಗೆಳತಿಯನ್ನು ಸೂಟ್‌ಕೇಸ್‌ನೊಳಗೆ ಬಚ್ಚಿಟ್ಟು ಬಾಲಕರ ಹಾಸ್ಟೆಲ್‌ಗೆ ಕರೆದೊಯ್ದ ವೇಳೆ ಸಿಕ್ಕಿ ಬಿದ್ದಿರುವ ಘಟನೆ ಹರಿಯಾಣದ (Haryana) ಸೋನಿಪತ್‌ನಲ್ಲಿರುವ ಒಪಿ ಜಿಂದಾಲ್ ವಿಶ್ವವಿದ್ಯಾಲಯದಲ್ಲಿ (OP Jindal Global University) ನಡೆದಿದೆ.

ಭದ್ರತಾ ಸಿಬ್ಬಂದಿ ನಿಂತಿದ್ದ ವೇಳೆ ಅಲ್ಲೇ ಎದುರುಗಡೆ ಇದ್ದ ಸೂಟ್‌ಕೇಸ್ (Suitcase) ಅಲುಗಾಡಿ ತೆರೆದುಕೊಂಡಿದೆ. ಗಾಬರಿಗೊಂಡ ಭದ್ರತಾ ಸಿಬ್ಬಂದಿ ಸೂಟ್‌ಕೇಸ್ ನೋಡಿದಾಗ ಅದರ ಒಳಗೆ ಯುವತಿ ಅವಿತುಕೊಂಡಿರುವುದು ಪತ್ತೆಯಾಗಿದೆ. ಇದನ್ನೂ ಓದಿ: ದೇಶದ ಇತಿಹಾಸದಲ್ಲಿ ಮೊದಲು; ರಾಜ್ಯಪಾಲರು-ರಾಷ್ಟ್ರಪತಿಗಳ ಸಮ್ಮತಿಯಿಲ್ಲದೆ 10 ಕಾಯ್ದೆಗಳನ್ನ ಜಾರಿಗೊಳಿಸಿದ ತ.ನಾಡು ಸರ್ಕಾರ

ಸೂಟ್‌ಕೇಸ್ ಒಳಗಿದ್ದ ಹುಡುಗಿಯ ಗುರುತು ಇನ್ನೂ ತಿಳಿದಿಲ್ಲ. ಆಕೆಯೂ ಒಪಿ ಜಿಂದಾಲ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಅಥವಾ ಬೇರೆ ಸಂಸ್ಥೆಯ ವಿದ್ಯಾರ್ಥಿನಿಯೇ ಎಂಬುದು ಖಚಿತವಿಲ್ಲ. ಇದನ್ನೂ ಓದಿ: ಪಾಕಿಸ್ತಾನದಲ್ಲಿ 5.3 ತೀವ್ರತೆಯ ಭೂಕಂಪ – ಜಮ್ಮು-ಕಾಶ್ಮೀರದಲ್ಲೂ ಭೂಮಿ ಕಂಪಿಸಿದ ಅನುಭವ

ಈ ದೃಶ್ಯವನ್ನು ಸಹ ವಿದ್ಯಾರ್ಥಿನಿಯೊಬ್ಬಳು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವೀಡಿಯೋ ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ 4 ಲಕ್ಷಕ್ಕೂ ಅಧಿಕ ಜನರು ವೀಕ್ಷಿಸಿದರು. ನೆಟ್ಟಿಗರು ಕಾಮೆಂಟ್‌ಗಳ ಸುರಿಮಳೆಯನ್ನು ಹರಿಸುವ ಮೂಲಕ ತಮ್ಮ ಕಾಲೇಜು ದಿನಗಳ ಅನುಭವವನ್ನು ಬರೆದುಕೊಂಡಿದ್ದಾರೆ. ಇದನ್ನೂ ಓದಿ: UPI Down | ದೇಶಾದ್ಯಂತ ಯುಪಿಐ ಸೇವೆಗಳಲ್ಲಿ ವ್ಯತ್ಯಯ – ಬ್ಯಾಂಕಿಂಗ್‌ ಸೇವೆಗಳ ಮೇಲೂ ಪರಿಣಾಮ

ಈ ವಿಚಾರವಾಗಿ ವಿಶ್ವವಿದ್ಯಾಲಯದ ಪಿಆರ್‌ಓ ಪ್ರತಿಕ್ರಿಯಿಸಿ, ವಿದ್ಯಾರ್ಥಿಗಳು ತಮಾಷೆಗಾಗಿ ಈ ರೀತಿ ಮಾಡಿದ್ದಾರೆ. ನಮ್ಮಲ್ಲಿ ಭದ್ರತಾ ಸಿಬ್ಬಂದಿ ಬಿಗಿಯಾಗಿರುವುದರಿಂದ ವಿದ್ಯಾರ್ಥಿಯನ್ನು ಹಿಡಿಯಲಾಯಿತು. ಅದು ದೊಡ್ಡ ವಿಷಯವಲ್ಲ. ನಮ್ಮ ಭದ್ರತೆ ಯಾವಾಗಲೂ ಕಟ್ಟುನಿಟ್ಟಾಗಿರುತ್ತದೆ. ಈ ಘಟನೆಯ ಬಗ್ಗೆ ಯಾರೂ ಯಾವುದೇ ರೀತಿಯ ದೂರು ದಾಖಲಿಸಿಲ್ಲ ಎಂದು ಹೇಳಿದರು.

Share This Article