ಕುಶಾಲನಗರದಲ್ಲಿ ದ್ವಿಚಕ್ರ ವಾಹನಗಳ ಡಿಕ್ಕಿ ವಿದ್ಯಾರ್ಥಿನಿ ಸಾವು

Public TV
1 Min Read

ಮಡಿಕೇರಿ: ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಕುಶಾಲನಗರದಲ್ಲಿ (Kushalnagar) ನಡೆದಿದೆ. ಘಟನೆಯಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಗಾಯಗೊಂಡಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಟ್ಟಣದ ಇಂದಿರಾ ಬಡಾವಣೆಯ ನಿವಾಸಿ ಪೂಣಚ್ಚ ಎಂಬವರ ಪುತ್ರಿ ಭಾವನ (21) ಮೃತ ಯುವತಿ ಎಂದು ತಿಳಿದು ಬಂದಿದೆ. ಬೈಕ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು, ಸ್ಕೂಟಿಯಲ್ಲಿದ್ದ ಭಾವನ ತೀವ್ರವಾಗಿ ಗಾಯಗೊಂಡಿದ್ದಳು. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಯುವತಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಶಾಲಾ ಕಟ್ಟಡ ಕುಸಿದು ವಿದ್ಯಾರ್ಥಿ ದುರ್ಮರಣ- ಕಳಪೆ ಕಾಮಗಾರಿ ಆರೋಪ

ಸ್ಕೂಟಿಯಲ್ಲಿದ್ದ ಮತ್ತೋರ್ವ ವಿದ್ಯಾರ್ಥಿನಿ ಕೊಪ್ಪದ ಮರೂರು ನಿವಾಸಿ ನಿಸರ್ಗ ತೀವ್ರವಾಗಿ ಗಾಯಗೊಂಡಿದ್ದು, ಮೈಸೂರು (Mysuru) ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಭಾವನ ಬೆಂಗಳೂರಿನಲ್ಲಿ (Bengaluru) ವ್ಯಾಸಂಗ ಮಾಡುತ್ತಿದ್ದಳು. ಕುಶಾಲನಗರಕ್ಕೆ ಬಂದಿದ್ದ ಸ್ನೇಹಿತೆ ನಿಸರ್ಗಳೊಂದಿಗೆ ತೆರಳುತ್ತಿದ್ದಾಗ ಎದುರಿನಿಂದ ಬಂದ ಬೈಕ್ ಅಪಘಾತ ಸಂಭವಿಸಿತ್ತು. ಈ ಸಂಬಂಧ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್‍ಗೆ ಅಂಬೇಡ್ಕರ್ ಅಷ್ಟೆ ಅಲ್ಲ, ಭಗತ್ ಸಿಂಗ್, ರಾಜಗುರು, ಸುಖದೇವ್ ಸಹ ವಿರೋಧಿಗಳು: ಸಿ.ಟಿ ರವಿ

Share This Article