ಸ್ವಾತಂತ್ರ‍್ಯ ದಿನಾಚರಣೆ ಮುಗಿಸಿ ಮನೆಗೆ ತೆರಳುವಾಗ ವಿದ್ಯುತ್ ತಗುಲಿ ವಿದ್ಯಾರ್ಥಿ ಸಾವು

Public TV
1 Min Read

ತುಮಕೂರು: ಸ್ವಾತಂತ್ರ‍್ಯ ದಿನಾಚರಣೆ(Independence Day) ಮುಗಿಸಿ ಮನೆಗೆ ತೆರಳುವ ವೇಳೆ ವಿದ್ಯುತ್ ತಗುಲಿ ವಿದ್ಯಾರ್ಥಿ ಸಾವಿಗೀಡಾದ ಘಟನೆ ತುಮಕೂರು(Tumakuru) ಜಿಲ್ಲೆ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಹೆಚ್.ಕಾವಲ್ ಬಳಿ ನಡೆದಿದೆ.

ಹೇಮಂತ್ ಮೃತ ವಿದ್ಯಾರ್ಥಿ. ಈತ ಕಾವಲ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದ. ಇಂದು ಸ್ವಾತಂತ್ರ‍್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಳಗ್ಗೆ ಶಾಲೆಗೆ ತೆರಳಿದ್ದ ಹೇಮಂತ್ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮವನ್ನು ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಇದನ್ನೂ ಓದಿ: ನಾಳೆ ವರಮಹಾಲಕ್ಷ್ಮೀ ಹಬ್ಬ: ಗ್ರಾಹಕರಿಗೆ ಹೂ-ಹಣ್ಣು ಬೆಲೆ ಏರಿಕೆಯ ಬಿಸಿ

ರಸ್ತೆ ಬದಿಯಲ್ಲಿ ಅಳವಡಿಸಿದ್ದ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸಿದ ಪರಿಣಾಮ ವಿದ್ಯುತ್ ತಗುಲಿ ಹೇಮಂತ್ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಹಲವು ಬಾರಿ ವಿದ್ಯುತ್ ಕಂಬ ಸರಿಪಡಿಸುವಂತೆ ಕೆಇಬಿ  ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದರು. ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ವಿದ್ಯಾರ್ಥಿಯ ಸಾವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕೆಇಬಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯ ಕುರಿತು ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಾನು ಯಾವುದೇ ಹೊಂದಾಣಿಕೆಗೆ ಒಪ್ಪಲ್ಲ: ಯತ್ನಾಳ್

Share This Article