ಅಪಾರ್ಟ್ಮೆಂಟ್‌ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

Public TV
1 Min Read

ಮಂಗಳೂರು: ಅಪಾರ್ಟ್ಮೆಂಟ್‌ನ 12ನೇ ಮಹಡಿಯಿಂದ ಬಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಂಗಳೂರು (Mangaluru) ಹೊರವಲಯದ ಕುತ್ತಾರಿನಲ್ಲಿ (Kuttar) ನಡೆದಿದೆ.

ಕುತ್ತಾರು ನಿವಾಸಿ ಹಾಗೂ ದೇರಳಕಟ್ಟೆಯ (Deralakatte) ಯೆನಪೋಯ ಆಸ್ಪತ್ರೆಯ ವೈದ್ಯ ಡಾ.ಮುಮ್ತಾಝ್ ಅಹಮ್ಮದ್ ದಂಪತಿಯ ಮಗಳು ಹಿಬಾ ಐಮನ್ (15) ಮೃತ ದುರ್ದೈವಿ. ಇದನ್ನೂ ಓದಿ: ಬೋಯಿಂಗ್‌ ನಿರ್ಮಿತ ವಾಯುಸೇನೆಯ ಅಪಾಚೆ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

ಕುತ್ತಾರಿನಲ್ಲಿರುವ 18 ಮಹಡಿಯ ಸಿಲಿಕೋನಿಯಾ ಅಪಾರ್ಟ್ಮೆಂಟ್‌ನ 12ನೇ ಮಹಡಿಯಿಂದ ಹಿಬಾ ಐಮನ್ ಕೆಳಗೆ ಬಿದ್ದು ಸಾವನ್ನಪ್ಪಿದ್ದಾಳೆ. ಮಹಡಿಯಲ್ಲಿ ಬಟ್ಟೆ ಒಣ ಹಾಕುತ್ತಿದ್ದಾಗ ಘಟನೆ ನಡೆದಿದೆ ಎಂದು ಪೊಲೀಸರು ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ವಿಮಾನ ದುರಂತ: ವಿಮಾನಯಾನ ಸಚಿವರ ರಾಜೀನಾಮೆಗೆ ಸಚಿವ ಈಶ್ವರ ಖಂಡ್ರೆ ಒತ್ತಾಯ

ಹಿಬಾ ಐಮನ್‌ಳ ತಂದೆ, ತಾಯಿ ಇಬ್ಬರೂ ದೇರಳಕಟ್ಟೆ ಯೇನಪೋಯ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದು, ಹೆತ್ತವರು ಕರ್ತವ್ಯಕ್ಕೆ ತೆರಳಿದ್ದಾಗ ಅಪಾರ್ಟ್ಮೆಂಟ್‌ನಲ್ಲಿ ಈ ದುರ್ಘಟನೆ ನಡೆದಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article