ಚಾಲಕನ ನಿಯಂತ್ರಣ ತಪ್ಪಿ ಶಾಲಾ ಮಕ್ಕಳ ಬಸ್ ಅಪಘಾತ

Public TV
0 Min Read

ಕಲಬುರಗಿ: ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ನಗರದ ಅಯ್ಯಪ್ಪ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿರುವುದೇ ಈ ಅನಾಹುತಕ್ಕೆ ಕಾರಣ ಎಂದು ಹೇಳಲಾಗಿದೆ.

ಮಕ್ಕಳು ಖಾಸಗಿ ಬಸ್ಸಿನಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದರು. ಈ ವೇಳೆ ಶಾಲಾ ಆವರಣದಿಂದ ಸ್ವಲ್ಪ ಮುಂದೆ ಸಾಗುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಥಮಿಕ ಹಂತದ ಚಿಕಿತ್ಸೆ ನೀಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *