ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ 14 ವಿದ್ಯಾರ್ಥಿನಿಯರು- ಕಾರಣ ನಿಗೂಢ

Public TV
1 Min Read

ಕಾರವಾರ: 14 ವಿಧ್ಯಾರ್ಥಿನಿಯರು ಸಾಮೂಹಿಕವಾಗಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ದಾಂಡೇಲಿಯ ಜನತಾ ಶಾಲೆಯಲ್ಲಿ ನಡೆದಿದೆ.

9 ಮತ್ತು 10 ನೇ ತರಗತಿಯ ಒಟ್ಟು 14 ವಿಧ್ಯಾರ್ಥಿನಿಯರು (Students) ಎಡಗೈ ತೋಳಿನ ಕೆಳಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ. ಇರಲ್ಲಿ ಕೆಲವು ವಿದ್ಯಾರ್ಥಿನಿಯರು ಕೈ ಮೇಲೆ ಸ್ಟೆಪ್ಲರ್ ಪಿನ್ ನಿಂದ ಗೀರಿಕೊಂಡು ಕೈ ನರ ಕತ್ತರಿಸಿಕೊಳ್ಳಲು ಯತ್ನ ನಡೆಸಿದ್ದಾರೆ. ಶಾಲೆಯಲ್ಲಿ ತಪಾಸಣೆ ವೇಳೆ ಘಟನೆ ಬೆಳಕಿಗೆ ಬಂದಿದ್ದು ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದರೋ ಅಥವಾ ಶಾಲೆಯಲ್ಲಿ ಯತ್ನಿಸಿದರೋ ಮಾಹಿತಿ ಹೊರಬರಬೇಕಿದೆ. ಇದನ್ನೂ ಓದಿ: ಜನ್ಮದಿನದಂದು ದೆಹಲಿಯಲ್ಲಿ ಮೋದಿ ಮೆಟ್ರೋ ರೈಡ್ – ಪ್ರಯಾಣಿಕರೊಂದಿಗೆ ಸೆಲ್ಫಿ

ಆತ್ಮಹತ್ಯೆ ಯತ್ನಕ್ಕೆ ಕಾರಣ ನಿಗೂಢವಾಗಿದೆ. ಕೆಲವು ವಿದ್ಯಾರ್ಥಿನಿಯರು ಗೇಮ್ ಆಟದ ಟಾಸ್ಕ್ ಎಂದರೆ ಇನ್ನೂ ಕೆಲವರು ಬೇರೆಯೇ ಸಬೂಬು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಪೊಲೀಸರೊಂದಿಗೆ ಪೋಷಕರ ಸಭೆ ನಡೆಸಿ ಮಾಹಿತಿ ಕಲೆಹಾಕುವ ಪ್ರಯತ್ನ ನಡೆಸುತ್ತಿದ್ದು ತನಿಖೆ ನಡೆಯುತ್ತಿದೆ.

ಘಟನೆ ಸಂಬಂಧ ದಾಂಡೇಲಿ ನಗರ ಠಾಣೆಯಲ್ಲಿ ದೂರು ನೀಡಲಾಗಿದ್ದು ಈವರೆಗೂ ಪ್ರಕರಣ ದಾಖಲಾಗಿಲ್ಲ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್