ಮಗನನ್ನು ಕೊಂದ ಸುಚನಾ ಸೇಠ್‌ಗೆ ಯಾವುದೇ ಮಾನಸಿಕ ಖಿನ್ನತೆ ಇಲ್ಲ

Public TV
1 Min Read

ಪಣಜಿ: ಮಗನನ್ನು ಕೊಂದ ಸುಚನಾ ಸೇಠ್‌ಗೆ (Suchana Seth) ಯಾವುದೇ ಮಾನಸಿಕ ಕಾಯಿಲೆ (Mental Illness) ಇಲ್ಲ ಎಂದು ಗೋವಾ (Goa) ಪೊಲೀಸರು ತಿಳಿಸಿದ್ದಾರೆ.

4 ವರ್ಷದ ಮಗನನ್ನು ಕೊಂದು ಸೂಟ್‌ಕೇಸ್‌ನಲ್ಲಿ ಶವ ತುಂಬಿದ ಬೆಂಗಳೂರಿನ ಸ್ಟಾರ್ಟ್ಅಪ್ ಕಂಪನಿಯ ಉದ್ಯಮಿ ಕೇಸ್ ಈಗ ರೋಚಕ ತಿರುವು ಪಡೆದುಕೊಂಡಿದೆ. ಇನ್‌ಸ್ಟಿಟ್ಯೂಟ್ ಅಫ್ ಸೈಕಾಲಜಿ ಮತ್ತು ಹ್ಯೂಮನ್ ಬಿಹೇವಿಯರ್ ಸಂಸ್ಥೆಯಲ್ಲಿ ಫೆ.2 ರಂದು ಸೂಚನಾಳ ಮಾನಸಿಕ ಪರೀಕ್ಷೆಗೆ ಒಳಪಡಿಸಲಾಗಿತ್ತು. ಪರೀಕ್ಷಾ ವರದಿಯನ್ನು ಪೊಲೀಸರು ಕೋರ್ಟ್ ಎದುರು ಹಾಜರು ಪಡಿಸಿದ್ದು, ವರದಿಯ ಪ್ರಕಾರ ಸುಚನಾಗೆ ಯಾವುದೇ ಮಾನಸಿಕ ಖಿನ್ನತೆ ಇಲ್ಲವೆಂದು ಸಾಬೀತಾಗಿದೆ. ಗಂಡನ ಮೇಲಿನ ಅತಿಯಾದ ಕೋಪ ಹೀಗೆ ಮಾಡಿಸಿರಬಹುದು ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಿಂದ ಸೋನಿಯಾ ಗಾಂಧಿ ರಾಜ್ಯಸಭೆಗೆ ಸ್ಪರ್ಧೆ

ಮಾನಸಿಕ ಖಿನ್ನತೆಯಿಂದ ಆಕೆ ಈ ರೀತಿ ನಡೆದು ಕೊಂಡಿರಬಹುದು. ಮಗುವಿನ ಮೇಲೆ ಯಾವುದೇ ಕೋಪ ಇರಲಿಲ್ಲ ಅಂತ ಸುಚನಾ ತಂದೆ ಪೊಲೀಸರ ಮುಂದೆ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಅಯೋಧ್ಯೆಗೆ ಬೆಂಗಳೂರಿನಿಂದ ಹೊರಟಿತು ವಿಶೇಷ ರೈಲು

ಸುಚನಾ ಸೇಠ್ ಪರೀಕ್ಷೆಯಲ್ಲಿ ಕೇಳಿರುವ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿದ್ದಾಳೆ. ನನಗೆ ಯಾವುದೇ ತೊಂದರೆ ಇಲ್ಲ. ಇದುವರೆಗೂ ಮಾನಸಿಕ ಖಿನ್ನತೆಗೆ ಯಾವುದೇ ಚಿಕಿತ್ಸೆ ಪಡೆದಿಲ್ಲ ಎಂದು ಪೊಲೀಸರ ಮುಂದೆ ಉತ್ತರಿಸಿದ್ದಾಳೆ. ನನಗೆ ಮಾನಸಿಕ ಖಿನ್ನತೆಯ ಯಾವುದೇ ಲಕ್ಷಣಗಳು ಇಲ್ಲ. ಕೆಲಸದ ಒತ್ತಡವಾಗಲಿ, ಕೌಟುಂಬಿಕ ಹಿನ್ನೆಲೆಯಾಗಲಿ ಇಲ್ಲ ಎಂದು ಉತ್ತರಿಸಿದ್ದಾಳೆ. ಇದನ್ನೂ ಓದಿ: ಪುಲ್ವಾಮಾ ದಾಳಿಗೆ 5 ವರ್ಷ: 2019ರ ಫೆ.14 ರಂದು ನಡೆದಿದ್ದು ಏನು?

ಗೋವಾದಲ್ಲಿ ತನ್ನ 4 ವರ್ಷ ಮಗುವನ್ನು ಕೊಲೆ ಮಾಡಿ ಬ್ಯಾಗ್‌ನಲ್ಲಿಟ್ಟು ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಸಮಯದಲ್ಲಿ ಸೂಚನಾಳನ್ನು ಚಿತ್ರದುರ್ಗದ ಬಳಿ ಪೊಲೀಸರು ಬಂಧಿಸಿದ್ದರು. ಪ್ರಸ್ತುತ ಸುಚನಾ ನ್ಯಾಯಾಂಗ ಬಂಧನದಲ್ಲಿದ್ದಾಳೆ. ಇದನ್ನೂ ಓದಿ:  6 ತಿಂಗಳ ಆಹಾರ ಸಾಮಾಗ್ರಿ ಹಿಡಿದು ದೆಹಲಿಚಲೋಗೆ ಬಂದ ರೈತರು

Share This Article