ವಿವಾದದ ನಡುವೆಯೂ ಪಾರ್ಟಿ ಮೂಡ್‌ಗೆ ಜಾರಿದ ಕಿಚ್ಚ ಸುದೀಪ್

Public TV
1 Min Read

ಸ್ಯಾಂಡಲ್‌ವುಡ್‌ನಲ್ಲಿ (Sandalwood) ಸದ್ಯದ ಸುದ್ದಿ ಅಂದರೆ ನಿರ್ಮಾಪಕ ಎನ್.ಕುಮಾರ್- ಕಿಚ್ಚ ಸುದೀಪ್ (Kiccha Sudeep) ಅವರ ವಿವಾದ. ತನ್ನಿಂದ ಹಣ ಪಡೆದು ಕಾಲ್‌ಶೀಟ್ ನೀಡುತ್ತಿಲ್ಲ ಎಂದು ಕುಮಾರ್ ಆರೋಪಿಸಿದ್ದರು. ಈ ವಿಚಾರವಾಗಿ ಸುದೀಪ್ ಕೋರ್ಟ್ ಮೆಟ್ಟಿಲೇರಿದ್ದರು. ಇಬ್ಬರ ಮಧ್ಯೆ ಜಟಾಪಟಿ ನಡೆಯುತ್ತಿದೆ. ಹೀಗಿರುವಾಗ ಸದ್ಯ ಸುದೀಪ್, ವಿವಾದ ಮರೆತು ಪಾರ್ಟಿ ಮೂಡ್‌ನಲ್ಲಿದ್ದಾರೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಕಿಚ್ಚ ಸುದೀಪ್ ಅವರಿಗೆ ದೊಡ್ಡ ಮಟ್ಟದಲ್ಲಿ ಫ್ಯಾನ್ ಬೇಸ್ ಇದೆ. ಕಿಚ್ಚನ ಮೇಲೆ ಈ ರೀತಿ ಆರೋಪ ಮಾಡಿರೋದು ಸುದೀಪ್ ಫ್ಯಾನ್ಸ್‌ಗೆ ಬೇಸರವಾಗಿದೆ. ನೆಚ್ಚಿನ ನಟನ ವಿರುದ್ಧ ಆರೋಪಿಸಿದವರಿಗೆ ಕಿಚ್ಚನ ಫ್ಯಾನ್ಸ್ ಆಕ್ರೋಶ ಹೊರಹೊಕಿದ್ದಾರೆ. ಇನ್ನೂ ಕುಮಾರ್ ವಿರುದ್ಧ ಸುದೀಪ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಸದ್ಯ ಸಂಕಷ್ಟಗಳನ್ನ ಮರೆತು ಸುದೀಪ್ ಪಾರ್ಟಿ ಮಾಡಿದ್ದಾರೆ. ಇದನ್ನೂ ಓದಿ:‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಪ್ರಕಾಶ್ ರೈ- ರಮ್ಯಾಕೃಷ್ಣ

ಜುಲೈ 18ರ ರಾತ್ರಿ ಸುದೀಪ್ ಪಾರ್ಟಿ ಮಾಡಿದ್ದಾರೆ ಎನ್ನಲಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಸಂದೀಪ್ ಶರ್ಮಾ, ಕೆಸಿ ಕರಿಯಪ್ಪ, ಡೆಲ್ಲಿ ಕ್ಯಾಪಿಟಲ್ಸ್ ಪೃಥ್ವಿ ಶಾ, ‘ಹೆಬ್ಬುಲಿ’ ನಿರ್ದೇಶಕ ಕೃಷ್ಣ ಸೇರಿ ಮೊದಲಾದವರ ಜೊತೆ ಸುದೀಪ್ ಪಾರ್ಟಿ ಮಾಡಿದ್ದಾರೆ. ಈ ಫೋಟೋಗಳನ್ನು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಸುದೀಪ್ ಸೂಪರ್ ಕೂಲ್ ಆಗಿರುವುದನ್ನು ನೋಡಿ ಕಿಚ್ಚನ ಫ್ಯಾನ್ಸ್ ಖುಷಿ ಕೊಟ್ಟಿದೆ.

ಇನ್ನೂ ಸುದೀಪ್ ನಟನೆಯ  ‘K46’ ಸಿನಿಮಾ ಫಸ್ಟ್ ಲುಕ್ ಟೀಸರ್ ಅಭಿಮಾನಿಗಳ ಗಮನ ಸೆಳೆದಿದೆ. ಚಿತ್ರದ ಮುಂದಿನ ಅಪ್‌ಡೇಟ್‌ಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್