ಜು.16ರಂದು ಸಿಗಲಿದೆ ‌’ಮ್ಯಾಕ್ಸ್‌’ ಚಿತ್ರದ ಅಪ್‌ಡೇಟ್‌- ಕಿಚ್ಚ ಕೊಟ್ರು ಗುಡ್‌ ನ್ಯೂಸ್

Public TV
1 Min Read

ಸ್ಯಾಂಡಲ್‌ವುಡ್ ನಟ ಸುದೀಪ್ (Sudeep) ನಟನೆಯ ‘ಮ್ಯಾಕ್ಸ್’ (Max) ಸಿನಿಮಾದ ಚಿತ್ರೀಕರಣ ಮುಗಿದಿದೆ. ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸಗಳು ಭರದಿಂದ ನಡೆಯುತ್ತಿವೆ. ಇದರ ನಡುವೆ ‘ಮ್ಯಾಕ್ಸ್’ ಸಿನಿಮಾದ ಬಗ್ಗೆ ಏನು ಅಪ್‌ಡೇಟ್ ಸಿಗದೇ ಕಾಯುತ್ತಿದ್ದ ಫ್ಯಾನ್ಸ್‌ಗೆ ಈಗ ಗುಡ್ ನ್ಯೂಸ್ ಸಿಕ್ಕಿದೆ.

ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಜುಲೈ 16ರಂದು ಮಧ್ಯಾಹ್ನ 12:34ಕ್ಕೆ ಬಿಗ್ ಅಪ್‌ಡೇಟ್ ಸಿಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಸಿನಿಮಾ ಬಗೆಗಿನ ಸುದ್ದಿ ಏನೆಂದು ಜು.16ರವರೆಗೂ ಕಾಯಬೇಕಿದೆ. ಇದನ್ನೂ ಓದಿ:‘ಕೆಂಡ’ ಟ್ರೈಲರ್‌ನಲ್ಲಿ ಕಂಡು ಕೇಳರಿಯದ ಕಥೆಯ ಸುಳಿವು!

ಸುದೀಪ್ ನಟನೆಯ ‘ಮ್ಯಾಕ್ಸ್’ ಚಿತ್ರಕ್ಕೆ ವಿಜಯ್ ಕಾರ್ತಿಕೇಯ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ವರಲಕ್ಷ್ಮಿ ಶರತ್‌ಕುಮಾರ್, ಸಂಯುಕ್ತಾ ಹೊರನಾಡ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಬಹುಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ.

ಅಂದಹಾಗೆ, 2022ರಲ್ಲಿ ತೆರೆಕಂಡ `ವಿಕ್ರಾಂತ್ ರೋಣ ಚಿತ್ರದ ನಂತರ ಸುದೀಪ್ ಗ್ಯಾಪ್ ತೆಗೆದುಕೊಂಡರು. ಬಿಗ್ ಬಾಸ್ ಶೋ ಸೇರಿದಂತೆ ಇತರೆ ಕೆಲಸಗಳಲ್ಲಿ ಬ್ಯುಸಿಯಾದರು. ಹಾಗಾಗಿ ಮ್ಯಾಕ್ಸ್ ಚಿತ್ರ ನೋಡೋಕೆ ಅಭಿಮಾನಿಗಳು ಕಾಯ್ತಿದ್ದಾರೆ.

Share This Article