ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಸುದೀಪ್‌

Public TV
1 Min Read

ಕಿಚ್ಚ ಸುದೀಪ್ (Kiccha Sudeep) ಅವರು ಇಂದು (ಫೆ.28) ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸಿಸಿಎಲ್ ತಂಡದ ಜೊತೆ ಚಾಮುಂಡಿ ತಾಯಿಯ ದರ್ಶನ ಪಡೆದಿದ್ದಾರೆ.‌ ಇದನ್ನೂ ಓದಿ:ಸಿನಿಮಾ ಶೂಟಿಂಗ್‌ಗೆ ಸಜ್ಜಾದ ನಟ ದರ್ಶನ್ – ಅವಕಾಶ ಕೋರಿ ಮುಂದಿನ ವಾರ ಕೋರ್ಟ್ ಮೊರೆ

ಮೈಸೂರಿನಲ್ಲಿ ನಾಳೆ ಸಿಸಿಎಲ್ ಕ್ರಿಕೆಟ್ ಮ್ಯಾಚ್ ನಡೆಯಲಿದೆ. ಈ ಹಿನ್ನೆಲೆ ಸಿಸಿಎಲ್ ಟೀಮ್ ಜೊತೆ ಸುದೀಪ್ ಚಾಮುಂಡೇಶ್ವರಿ ದೇವಸ್ಥಾನಕ್ಕೆ (Chamundeshwari Temple) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಅಂದಹಾಗೆ, ‘ಮ್ಯಾಕ್ಸ್’ ಚಿತ್ರದ ಸಕ್ಸಸ್ ಮತ್ತು ‘ಬಿಗ್ ಬಾಸ್ ಕನ್ನಡ 11’ರ ಶೋ ಮುಕ್ತಾಯದ ಬಳಿಕ ಸುದೀಪ್ ಅವರು ಸಿಸಿಎಲ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಇದಾದ ಬಳಿಕ ಅನೂಪ್ ಭಂಡಾರಿ ಜೊತೆ ಅವರು ಸಿನಿಮಾ ಮಾಡಲಿದ್ದಾರೆ.

Share This Article