ಸಲ್ಮಾನ್ ಖಾನ್ ಹುಟ್ಟು ಹಬ್ಬಕ್ಕೆ ವಿಶ್ ಮಾಡಿದ ಸುದೀಪ್

Public TV
1 Min Read

ಬಾಲಿವುಡ್ ನ ಖ್ಯಾತ ನಟ ಸಲ್ಮಾನ್ ಖಾನ್ (Salman Khan) ಇಂದು ಹುಟ್ಟು ಹಬ್ಬವನ್ನು (Birthday) ಆಚರಿಸಿಕೊಳ್ಳುತ್ತಿದ್ದಾರೆ. ಸಲ್ಮಾನ್ ಹುಟ್ಟು ಹಬ್ಬಕ್ಕೆ ಕಿಚ್ಚ ಸುದೀಪ್ (Kiccha Sudeep) ಶುಭಾಶಯ ತಿಳಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಅವರು ಬರೆದುಕೊಂಡಿದ್ದು, ನಿಮ್ಮೊಂದಿಗೆ ಕಳೆದ ಕ್ಷಣಗಳು ಯಾವತ್ತಿಗೂ ಹಸಿರಾಗಿರುತ್ತವೆ. ನಿಮ್ಮಂತಹ ಅದ್ಭುತ ಮನುಷ್ಯ ನನಗೆ ಸಿಕ್ಕಿದ್ದಕ್ಕೆ ಧನ್ಯವಾದಗಳು’ ಎಂದು ಅವರು ಹೇಳಿದ್ದಾರೆ.

ಕೆಲ ತಿಂಗಳ ಹಿಂದೆಯಷ್ಟೇ ಕಿಚ್ಚ ಸುದೀಪ್ ನೀಡಿದ ಸಂದರ್ಶನವೊಂದರಲ್ಲಿ ತಮ್ಮ ನಿರ್ದೇಶನದ ಬಗ್ಗೆ ಬ್ರೇಕಿಂಗ್ ಅಪ್‌ಡೇಟ್‌ವೊಂದನ್ನ ನೀಡಿದ್ದರು. ಬ್ಯಾಡ್ ಬ್ಯಾಯ್ ಸಲ್ಮಾನ್ ಖಾನ್‌ ಗಾಗಿ ಚಿತ್ರವೊಂದನ್ನು ನಿರ್ದೇಶನ ಮಾಡುವುದಾಗಿ ಹೇಳಿದ್ದರು.

ಸಲ್ಲುಗಾಗಿಯೇ ಕಿಚ್ಚ ಭಿನ್ನ ಕಥೆ ಬರೆದಿದ್ದಾರೆ. ಮುಂದಿನ ದಿನಗಳಲ್ಲಿ ಸಲ್ಮಾನ್ ಖಾನ್‌ಗೆ ಕಥೆ ಹೇಳಿ, ಸಿನಿಮಾ ಮಾಡುವುದಾಗಿ ಕಿಚ್ಚ ಸುದೀಪ್ ಹೇಳಿಕೊಂಡಿದ್ದಾರೆ. ಈ ಮೂಲಕ ತಾವು ಮತ್ತೆ ನಿರ್ದೇಶನದ ಕ್ಯಾಪ್ ಧರಿಸುವ ಸೂಚನೆ ನೀಡಿದ್ದಾರೆ. ಇನ್ನು ವಿಕ್ರಾಂತ್ ರೋಣ ಚಿತ್ರದ ಹಿಂದಿ ವರ್ಷನ್ ಅನ್ನು ಸಲ್ಮಾನ್ ಖಾನ್ ಫಿಲ್ಮ್ಂ ಪ್ರೇಸೆಂಟ್ ಮಾಡಿದೆ. ಈ ಮೂಲಕ ಸುದೀಪ್ ಸಲ್ಮಾನ್ ಸಾಥ್ ನೀಡಿದ್ದಾರೆ.

 

ಸಲ್ಮಾನ್ ಖಾನ್ ಮತ್ತು ಸುದೀಪ್ ಈಗಾಗಲೇ ಒಟ್ಟಿಗೆ ನಟಿಸಿದ್ದಾರೆ. ತೆರೆಮರೆಯಲ್ಲಿ ಕೂಡ ಒಳ್ಳೆಯ ಬಾಂಧವ್ಯವಿದೆ. ಈ ಸ್ನೇಹಕ್ಕೆ ಸಾಕ್ಷಿಯಾಗಿ ಕಿಚ್ಚನ ಸಿನಿಮಾಗೆ ಸಲ್ಲು ಸಾಥ್ ನೀಡಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಇವರಿಬ್ಬರ ಕಾಂಬಿನೇಷನ್‌ನಲ್ಲಿ ಸಿನಿಮಾ ನೋಡುವುದು ಪಕ್ಕಾ ಎನ್ನಲಾಗುತ್ತಿದೆ.

Share This Article