The Vaccine War ಸಿನಿಮಾ ನೋಡಿ ಹೊಗಳಿದ ಸುಧಾ ಮೂರ್ತಿ

By
2 Min Read

‘ದಿ ಕಾಶ್ಮೀರಿ ಫೈಲ್ಸ್’ ಖ್ಯಾತಿಯ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಈಗ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದ ಮೂಲಕ ಸದ್ದು ಮಾಡ್ತಿದ್ದಾರೆ. ರಿಲೀಸ್‌ಗೂ ಮುನ್ನವೇ ಸಿನಿಮಾ ಗಮನ ಸೆಳೆಯುತ್ತಿದೆ. ಸೆಲೆಬ್ರಿಟಿಗಳಿಗಾಗಿ ವಿಶೇಷ ಶೋವೊಂದನ್ನ ಬೆಂಗಳೂರಿನಲ್ಲಿ (ಸೆ.18) ಆಯೋಜಿಸಲಾಗಿತ್ತು. ಈ ವೇಳೆ ಸುಧಾ ಮೂರ್ತಿ ಅವರು ಆಗಮಿಸಿದ್ದರು. ದಿ ವ್ಯಾಕ್ಸಿನ್ ವಾರ್ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದನ್ನೂ ಓದಿ:‘ಆದಿಪುರುಷ್’ ಸೋಲಿನ ಬಳಿಕ ಮಾಸ್ ಆಗಿ ಎಂಟ್ರಿ ಕೊಟ್ರು ಕೃತಿ ಸನೋನ್

‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಮನ ಮುಟ್ಟುವ ಸಿನಿಮಾ ಎಂದು ಸುಧಾ ಮೂರ್ತಿ ಕರೆದಿದ್ದಾರೆ. ಎಲ್ಲರಿಗೂ ನಮಸ್ಕಾರ ಎಂದು ಕನ್ನಡದಲ್ಲಿ ಮಾತು ಆರಂಭಿಸಿ ಆ ಬಳಿಕ ಇಂಗ್ಲಿಷ್‌ನಲ್ಲಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದರು. ನಾನು ಮಹಿಳೆಯರ ಪಾತ್ರವನ್ನು ಅರ್ಥ ಮಾಡಿಕೊಂಡಿದ್ದೇನೆ. ಅವಳು ತಾಯಿ, ಪತ್ನಿ ಜೊತೆ ವೃತ್ತಿ ಬದುಕನ್ನು ನಡೆಸುವವಳೂ ಹೌದು. ಕುಟುಂಬ ಹಾಗೂ ಕೆಲಸವನ್ನು ಸಮದೂಗಿಸಿಕೊಂಡು ಹೋಗುವುದು ಕಷ್ಟ. ಕೆಲವರು ಈ ವಿಚಾರದಲ್ಲಿ ಅದೃಷ್ಟಶಾಲಿಗಳು. ನಾವು ಉಳಿದುಕೊಂಡ ಕಟ್ಟಡದ ಮೇಲೆ ನಮ್ಮ ತಂದೆ ತಾಯಿ ವಾಸಿಸುತ್ತಿದ್ದರು. ನಾನು ಕೆಳಗೆ ವಾಸಿಸುತ್ತಿದ್ದೆ. ಹೀಗಾಗಿ ಹೆಚ್ಚಿನ ಕೆಲಸ ಮಾಡಲು ನನಗೆ ಸಹಕಾರಿ ಆಯಿತು. ಮಕ್ಕಳನ್ನು ಬೆಳೆಸುತ್ತಾ ವೃತ್ತಿ ಜೀವನ ನಡೆಸಿಕೊಂಡು ಹೋಗೋದು ಕಷ್ಟ. ಹಾಗೆ ಮಾಡಬೇಕು ಎಂದರೆ ಕುಟುಂಬದ ಬೆಂಬಲ ಬೇಕು ಅದು ಮುಖ್ಯ ಎಂದಿದ್ದಾರೆ. ಇದನ್ನೂ ಓದಿ:‘ಆದಿಪುರುಷ್’ ಸೋಲಿನ ಬಳಿಕ ಮಾಸ್ ಆಗಿ ಎಂಟ್ರಿ ಕೊಟ್ರು ಕೃತಿ ಸನೋನ್

ಮಹಿಳಾ ವಿಜ್ಞಾನಿಗಳು ಕೊವಿಡ್ ಸಂದರ್ಭದಲ್ಲಿ ಲ್ಯಾಬ್‌ಗೆ ಬಂದು ಸಂಶೋಧನೆ ಮಾಡಿದ್ದರು. ಇದನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ಕೊವಾಕ್ಸಿನ್ ಏನು ಎಂಬುದು ಸಾಮಾನ್ಯ ಜನರಿಗೆ ಅರ್ಥವಾಗುವುದಿಲ್ಲ. ಆದರೆ, ಹಿಂದಿರುವ ಶ್ರಮವನ್ನು ಈ ಸಿನಿಮಾ ತೋರಿಸುತ್ತದೆ. ಎಲ್ಲಾ ವಿಜ್ಞಾನಿಗಳು ಮಾಡಿದ್ದು ನಿಸ್ವಾರ್ಥದ ಕೆಲಸ. ಕೊವಿಡ್ ಅವಧಿಯಲ್ಲಿ ಅವರು ಗರಿಷ್ಟ ಸಮಯವನ್ನು ಔಷಧ ಕಂಡು ಹಿಡಿಯಲು ಕಳೆದರು. ಇದರಿಂದ ನಾವು ಸುಖವಾಗಿ ಬದುಕುವಂತಾಯಿತು ಎಂದು ಸುಧಾ ಮೂರ್ತಿ ಮಾತನಾಡಿದ್ದರು. ಕಲಾವಿದರ ನಟನೆ, ವಿವೇಕ್‌ ಅಗ್ನಿಹೋತ್ರಿ ನಿರ್ದೇಶನ ಮತ್ತು ತಂಡದ ಶ್ರಮಕ್ಕೆ ಭೇಷ್ ಎಂದಿದ್ದಾರೆ.

ಇದೇ ಸೆ.28ರಂದು ‘ದಿ ವ್ಯಾಕ್ಸಿನ್ ವಾರ್’ (The Vaacine War) ಸಿನಿಮಾ ರಿಲೀಸ್ ಆಗುತ್ತಿದೆ. ಸಿನಿಮಾದಲ್ಲಿ ಕಾಂತಾರ ನಟಿ ಸಪ್ತಮಿ ಗೌಡ, ಅನುಪಮ್ ಖೇರ್, ಪಲ್ಲವಿ ಜೋಶಿ, ರೈಮಾ ಸೇನ್ ಸೇರಿದಂತೆ ಹಲವರು ನಟಿಸಿದ್ದಾರೆ. ‘ದಿ ಕಾಶ್ಮೀರಿ ಫೈಲ್ಸ್’ ಸಕ್ಸಸ್ ನಂತರ ಈ ಸಿನಿಮಾಗೆ ವಿವೇಕ್ ಅಗ್ನಿಹೋತ್ರಿ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದ ರಿಲೀಸ್‌ಗೆ ಫ್ಯಾನ್ಸ್ ಕಾಯ್ತಿದ್ದಾರೆ.

‘ಕಾಂತಾರ’ (Kantara) ಸಿನಿಮಾದ ಸಕ್ಸಸ್ ನಂತರ ಸಪ್ತಮಿ ಗೌಡ (Saptami Gowda) ನಟನೆಯ ಮೊದಲ ಬಾಲಿವುಡ್ ಸಿನಿಮಾ ಇದಾಗಿದೆ.

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್