ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

1 Min Read

ಚಿತ್ರದುರ್ಗ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಡಿ.ಸುಧಾಕರ್ (D.Sudhakar)‌ ಅವರ ಬಗ್ಗೆ ಇತ್ತೀಚೆಗೆ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿಯವರ ವಿರುದ್ಧ ಸುಹಾಸ್ ಸುಧಾಕರ್ ಬೇಸರ ಹೊರಹಾಕಿದ್ದಾರೆ.

ಈ ಬಗ್ಗೆ ಅವರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ವಿಡಿಯೋದಲ್ಲಿ, ಹೆಬ್ಬೆಟ್ಟು ಬಳಕೆ ಬಗ್ಗೆ ಹೆಚ್‌ಡಿಕೆ ಹೇಳಿಕೆಯಿಂದ ನೋವಾಗಿದೆ. ನಮ್ಮ ತಂದೆಯ ಅನಾರೋಗ್ಯ ವಿಚಾರ ರಾಜಕೀಯಕ್ಕೆ ಬಳಕೆಯಾಗುತ್ತಿದೆ. ರಾಜಕೀಯ ಜಿದ್ದಾಜಿದ್ದಿಗೆ ಬಳಸಿಕೊಂಡಿದ್ದು ತುಂಬಾ ನೋವಾಗಿದೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಡಿ.ಸುಧಾಕರ್‌ ಸ್ಥಿತಿ ಗಂಭೀರ – ಕೆಲ‌ವರು ಇಂತಹ ಸಂದರ್ಭ ದುರ್ಬಳಕೆ ಮಾಡಿಕೊಳ್ಳುವುದರಲ್ಲಿ ಎಕ್ಸ್‌ಪರ್ಟ್‌ ಎಂದ ಹೆಚ್‌ಡಿಕೆ

ನಮ್ಮ ತಂದೆ ಈಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಬೇಗ ಗುಣಮುಖರಾಗಿ ಬರುವ ನಂಬಿಕೆಯಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ ಸೇರಿ ಮಂತ್ರಿಗಳು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಹೆಚ್‌ಡಿಕೆ ಹೇಳಿದ್ದೇನು?
ಸಚಿವ ಡಿ.ಸುಧಾಕರ್‌ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕೆಲ‌ವರು ಇಂತಹ ಸಂದರ್ಭ ದುರ್ಬಳಕೆ ಮಾಡಿಕೊಳ್ಳುವುದರಲ್ಲಿ ಎಕ್ಸ್‌ಪರ್ಟ್ ಇದ್ದಾರೆ ಎಂದು ಪರೋಕ್ಷವಾಗಿ ಡಿ.ಕೆ ಶಿವಕುಮಾರ್ (D.K Shivakumar) ವಿರುದ್ಧ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ವಾಗ್ದಾಳಿ ನಡೆಸಿದ್ದರು.

ಚಿತ್ರದುರ್ಗದ (Chitradurga) ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾಗ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದರು. ಈ ವೇಳೆ ಸಚಿವ‌ ಸುಧಾಕರ್ ಸಾವು ಬದುಕಿನ ನಡುವೆ ಹೋರಾಟ ನಡೆಸ್ತಿದ್ದಾರೆ. ಆದರೆ ಆಸ್ಪತ್ರೆಯ ಒಳಗೆ ಏನು ನಡೆಯುತ್ತಿದೆ ಎಂಬುದನ್ನು ನೋಡಬೇಕು. ಆ ವ್ಯಕ್ತಿ ಎಷ್ಟು ನೋವು ಅನುಭವಿಸುತ್ತಿದ್ದಾನೋ ಪಾಪ. ಯಾವ ಕಾರಣಕ್ಕೆ ಕೆಲ ವಿಷಯ ಮುಚ್ಚಿಟ್ಟಿದ್ದಾರೆ ಎಂಬುದು ಅರಿಯಬೇಕು. ಆ ವ್ಯಕ್ತಿಯಿಂದ‌ ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಮುಚ್ಚಿಡಲಾಗಿದೆಯೇ? ಎಂದು ಅನುಮಾನ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಸಚಿವ ಸಧಾಕರ್‌ಗೆ ಇನ್ನೂ ಪ್ರಜ್ಞೆ ಬಂದಿಲ್ಲ: ಸಿದ್ದರಾಮಯ್ಯ

Share This Article