ನಾನು ಯಾವತ್ತೂ ಮಂಡ್ಯ ಬಿಡಲ್ಲ, ರಕ್ತದಲ್ಲಿ ಬರೆದು ಕೊಡಬೇಕಾ: ಸುಮಲತಾ ಪ್ರಶ್ನೆ

By
2 Min Read

ಮಂಡ್ಯ: ನಾನು ಮಂಡ್ಯದ ಸೊಸೆ, ಯಾವತ್ತೂ ಮಂಡ್ಯವನ್ನು ಬಿಡುವುದಿಲ್ಲ. ರಾಜಕಾರಣ ಬಿಟ್ಟರೂ ಸ್ವಾಭಿಮಾನ ಹಾಗೂ ಸಿದ್ಧಾಂತವನ್ನು ಬಿಡುವುದಿಲ್ಲ. ಇದನ್ನೂ ರಕ್ತದಲ್ಲಿ ಬರೆದು ಕೊಡಬೇಕಾ? ಎಂದು ಸಂಸದೆ ಸುಮಲತಾ ಅಂಬರೀಶ್ (Sumalatha Ambarish) ಹೇಳಿದ್ದಾರೆ.

ಮಂಡ್ಯದಲ್ಲಿ (Mandya) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬರೀಶ್ ಕುಟುಂಬಕ್ಕೆ ಮಂಡ್ಯ ಜನರು ಸಾಕಷ್ಟು ಪ್ರೀತಿ ಕೊಟ್ಟು ಹರಸಿದ್ದಾರೆ. ಮಂಡ್ಯ ಬಿಟ್ಟು ನಾನು ಬೇರೆಲ್ಲೂ ಹೋಗುವುದಿಲ್ಲ. ಜೆಡಿಎಸ್ (JDS) ಬಿಜೆಪಿ (BJP) ಮೈತ್ರಿ ಆಗಿದೆ. ಆದರೆ ಕ್ಷೇತ್ರ ಹಂಚಿಕೆ ಇನ್ನೂ ಆಗಿಲ್ಲ. ಈ ಬಗ್ಗೆ ಈಗ ಎದ್ದಿರುವ ಊಹಾಪೋಹಗಳಿಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಈ ಬಗ್ಗೆ ನಾನು ದುಡುಕಿನ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ನಿತ್ಯ 2 ಗಂಟೆ ಮಾತ್ರ ಪಟಾಕಿ ಸಿಡಿಸಲು ಅವಕಾಶ; ದೀಪಾವಳಿಗೆ ಟಫ್‌ ರೂಲ್ಸ್‌

ಕ್ಷೇತ್ರ ಹಂಚಿಕೆ ಬಗ್ಗೆ ನೂರಾರು ಮಾತುಕತೆ ನಡೆದಿರಬಹುದು. ಆದರೆ ಯಾವುದೇ ಕ್ಷೇತ್ರ ಹಂಚಿಕೆ ಇನ್ನೂ ಖಚಿತವಾಗಿಲ್ಲ. ಮಂಡ್ಯ ಜನ ನನ್ನ ಜೊತೆ ಯಾವಾಗಲೂ ಇದ್ದಾರೆ. ನನಗೆ ಆ ಆತ್ಮವಿಶ್ವಾಸವಿದೆ, ಈ ಕ್ಷೇತ್ರ ಬೇಕು, ಆ ಕ್ಷೇತ್ರ ಬೇಕು ಎಂದು ಯಾವ ಪಕ್ಷವನ್ನೂ ನಾನು ಕೇಳಿಲ್ಲ. ನನ್ನ ರಾಜಕೀಯ ಭವಿಷ್ಯದ ಬಗ್ಗೆ ನನಗೆ ಯೋಚನೆ ಇಲ್ಲ ಎಂದಿದ್ದಾರೆ.

ಬೆಂಗಳೂರು ಉತ್ತರ ಕ್ಷೇತ್ರದ ಆಫರ್ ಅನ್ನು ಕಳೆದ ಚುನಾವಣೆಯಲ್ಲೇ ನಿರಾಕರಿಸಿದ್ದೆ. ನನಗೆ ಈ ಸ್ಥಾನಮಾನ ಕೊಟ್ಟಿದ್ದು ಮಂಡ್ಯ ಜನರು. ಬೇರೆ ಕ್ಷೇತ್ರದ ಆಫರ್ ಅನ್ನು ನಾನು ಎಂದಿಗೂ ಒಪ್ಪುವುದಿಲ್ಲ. ಈ ವಿಷಯವನ್ನು ನೂರಾರು ಬಾರಿ ಹೇಳಿದ್ದೇನೆ. ಇದನ್ನು ನನ್ನ ರಕ್ತದಲ್ಲಿ ಬರೆದು ಕೊಡಬೇಕಾ? ಎಂದಿದ್ದಾರೆ.

ಮಂಡ್ಯ ಜಿಲ್ಲೆಯ ರಾಜಕಾರಣ ಯಾವಾಗಲೂ ಒಂದು ಸವಾಲು. ಈ ಸವಾಲಿಗೆ ಹೆದರುವ ಸ್ವಭಾವ ನನ್ನದಲ್ಲ ಎಂದು ಅವರು ತಮ್ಮ ಮುಂದಿನ ರಾಜಕೀಯ ನಡೆಯ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕರಾಳ ದಿನ ಆಚರಿಸಿದ MES ಪುಂಡರಿಗೆ ಬಿಸಿ ಮುಟ್ಟಿಸಿದ ಪೊಲೀಸರು – 18 ಮಂದಿ ವಿರುದ್ಧ FIR

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್