ಜೈಲಿನಲ್ಲಿರೋದೇ ಕ್ರಿಮಿನಲ್ಸ್ ಅಲ್ವಾ?- ದರ್ಶನ್ ಫೋಟೋ ವಿವಾದಕ್ಕೆ ಸುಮಲತಾ ರಿಯಾಕ್ಷನ್

Public TV
1 Min Read

ರಪ್ಪನ ಅಗ್ರಹಾರದಲ್ಲಿರುವ ದರ್ಶನ್‌ಗೆ (Darshan) ರಾಜಾತಿಥ್ಯ ಸಿಗುತ್ತಿದೆ ಅಂತ ಫೋಟೋವೊಂದು ಭಾರೀ ಚರ್ಚೆ ಹುಟ್ಟು ಹಾಕಿದ ಬೆನ್ನಲ್ಲೇ ನಟಿ ಸುಮಲತಾ (Sumalatha) ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ಸದ್ಯ ಆರೋಪಿ ಸ್ಥಾನದಲ್ಲಿದ್ದಾರೆ. ಉಳಿದವರನ್ನು ಬಿಟ್ಟು ಅವರನ್ನೇ ಹೈಲೆಟ್ ಮಾಡುತ್ತಿದ್ದಾರೆ ಎಂದು ನಟಿ ಮಾತನಾಡಿದ್ದಾರೆ. ಇದನ್ನೂ ಓದಿ:3 ವರ್ಷಗಳಿಂದ ಸೆಕ್ಸ್ ಮಾಡಿಲ್ಲ- ಕಾರಣ ಬಿಚ್ಚಿಟ್ಟ ಉರ್ಫಿ ಜಾವೇದ್

ಸುಮಲತಾ ಹುಟ್ಟುಹಬ್ಬದ ಹಿನ್ನೆಲೆ ಇಂದು (ಆ.27) ಅಂಬಿ ಸ್ಮಾರಕಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ ವಿಲ್ಸನ್ ಗಾರ್ಡನ್ ನಾಗ ಜೊತೆ ದರ್ಶನ್ ಕಾಣಿಸಿಕೊಂಡ ವಿಚಾರವಾಗಿ ನಟಿ ಮಾತನಾಡಿ, ವಿವೇಚನೆ ಇಟ್ಟುಕೊಂಡು ಮಾತನಾಡೋಣ, ಜೈಲಿನಲ್ಲಿ (Jail) ಯಾರು ಇರುತ್ತಾರೆ. ಜೈಲಿನಲ್ಲಿ ಇರುವುದೇ ಕ್ರಿಮಿನಲ್ಸ್ ಅಲ್ವಾ? ಎಂದು ಹೇಳಿದ್ದಾರೆ. ಅಲ್ಲಿ ಓಡಾಟ ನಡೆಸೋಕೆ ಯಾರು ಸಿಗುತ್ತಾರೆ. ಯಾವುದಾದ್ರೂ ಒಂದು ತಪ್ಪು ಮಾಡಿದವರೇ ಅಲ್ವಾ ಜೈಲಿಗೆ ಹೋಗೋದು ಎಂದು ದರ್ಶನ್‌ರನ್ನು ಸಮರ್ಥಿಸಿಕೊಂಡು ಸುಮಲತಾ ಮಾತನಾಡಿದ್ದಾರೆ.

ರಾಜಾತಿಥ್ಯದ ಬಗ್ಗೆ ಜೈಲಿಗೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಕೇಳಬೇಕು. ಇದರಲ್ಲಿ ಭಾಗಿಯಾದ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಾರೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಚಿವರು ಸೂಕ್ತ ಕ್ರಮ ತೆಗೆದುಕೊಳ್ತಾರೆ. ತನಿಖೆ ನಡೆಯುತ್ತಿದೆ ದರ್ಶನ್ ಈಗ ಆರೋಪಿ ಸ್ಥಾನದಲ್ಲಿದ್ದಾರೆ. ಜೈಲಿನಲ್ಲಿ ಉಳಿದವರನ್ನ ಬಿಟ್ಟು ದರ್ಶನ್‌ರನ್ನೇ ಹೈಲೆಟ್ ಮಾಡುತ್ತಿದ್ದಾರೆ ಎಂದು ನಟಿ ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನೂ ಜೈಲಿನಲ್ಲಿ ಕೂತು ಮಾತನಾಡಿರೋದು ತಪ್ಪು. ಆ ತಪ್ಪಿಗೆ ಅಧಿಕಾರಿಗಳನ್ನ ಸಸ್ಪೆಂಡ್ ಕೂಡ ಮಾಡಿದ್ದಾರೆ. ಇನ್ನೂ ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದಿದ್ದಾರೆ. ದರ್ಶನ್‌ರನ್ನು ಭೇಟಿಯಾಗೋದು ನನ್ನ ವೈಯಕ್ತಿಕ ವಿಚಾರ. ನಾನು ಇದರ ಬಗ್ಗೆ ಮಾತನಾಡಲ್ಲ ಎಂದು ಸುಮಲತಾ ಮಾತನಾಡಿದ್ದಾರೆ.

Share This Article