ಮಹಿಳೆಯನ್ನು ಕಟ್ಟಿಹಾಕಿ ಹಲ್ಲೆ ಕೇಸ್‌ – ಸಮರ್ಥಿಸಿಕೊಂಡ ಪ್ರಮೋದ್‌ ಮಧ್ವರಾಜ್‌ ಮೇಲೆ ಸುಮೋಟೊ ಕೇಸ್‌

Public TV
1 Min Read

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದ ಪ್ರತಿಭಟನೆ ಸಂದರ್ಭ ಪ್ರಮೋದ್ ಮಧ್ವರಾಜ್ ದ್ವೇಷ ಹರಡುವ ಭಾಷಣ ಮಾಡಿದ್ದಾರೆ ಎಂದು ಪೊಲೀಸರ ಸುಮೋಟೋ ಕೇಸು ದಾಖಲಿಸಿದ್ದಾರೆ.

ಮೀನು ಕದ್ದ ಪ್ರಕರಣದಲ್ಲಿ ಐವರು ಮೀನುಗಾರರ ಮೇಲೆ ಪೊಲೀಸರು ಅಟ್ರಾಸಿಟಿ ಕೇಸ್ ಹಾಕಿದ್ದರು. ಬೆಳವಣಿಗೆ ಖಂಡಿಸಿ ಮಲ್ಪೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಚಿವ, ಮೊಗವೀರ ಮುಖಂಡ ಪ್ರಮೋದ್ ಅವರು, ಮಹಿಳೆಯನ್ನು ಕಟ್ಟಿಹಾಕಿ ಎರಡು ಏಟು ಕೊಟ್ಟದ್ದನ್ನು ಸಮರ್ಥಿಸಿದ್ದರು. ಕಳ್ಳರನ್ನು ಕಟ್ಟಿ ಹಾಕಲೇಬೇಕು. ಮಚ್ಚಿನಲ್ಲಿ, ಖಡ್ಗದಲ್ಲಿ, ತಲೆವಾರಿನಲ್ಲಿ ಹೊಡೆದಿದ್ದಾ? ಎರಡು ಕೆನ್ನೆಗೆ ಬಾರಿಸಿದ್ದಾರೆ ಎಂದರು.

ಈ ಹೇಳಿಕೆ ಹಿನ್ನೆಲೆಯಲ್ಲಿ ಮಲ್ಪೆ ಪೊಲೀಸರು ಸುಮೋಟೋ ಕೇಸು ದಾಖಲಿಸಿದ್ದಾರೆ. ದ್ವೇಷ ಭಾವನೆಯಿಂದ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು, ಬಿಎನ್ ಎಸ್ 57, 191 (1)192 ನಂತೆ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕವಾಗಿ ಕಟ್ಟಿಹಾಕಿದ್ದು ಸರಿ ಎಂಬುದನ್ನು ಮಧ್ವರಾಜ್ ಸಮರ್ಥಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಕೇಸ್ ದಾಖಲಾಗಿದೆ.

Share This Article