ಇನ್ಮುಂದೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕುವಂತಿಲ್ಲ: ಸುನಿಲ್ ಕುಮಾರ್

Public TV
1 Min Read

ಮಂಗಳೂರು: ಮುಂದಿನ ವರ್ಷದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಗಳನ್ನು ಪಡೆಯದೆ, ಆಯ್ಕೆ ಸಮಿತಿಯನ್ನು ರಚಿಸಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ತಿಳಿಸಿದರು.

ಸನ್ಮಾನ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಪ್ರಶಸ್ತಿಗಾಗಿ ನಾವು ಎಂದು ಹುಡುಕಿಕೊಂಡು ಹೋಗಬಾರದು, ಪ್ರಶಸ್ತಿ ಸಾಧಕರನ್ನು ಗುರುತಿಸಿ ನೀಡುವಂತಾಗಬೇಕು. ಆ ನಿಟ್ಟಿನಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಸಾಧಕರ ಆಯ್ಕೆ ನಡೆಯಲಿದೆ ಎಂದು ಹೇಳಿದರು.

ನಾಡಿನೆಲ್ಲಡೆ ನೀರಿಗಾಗಿ ಗಲಾಟೆ, ಸಂಘರ್ಷ, ನ್ಯಾಯಾಲಯದ ಮೆಟ್ಟಿಲೇರುವ ಈ ಸಂದರ್ಭದಲ್ಲಿ ಮಹಾಲಿಂಗ ನಾಯ್ಕರ ಸಾಧನೆ ಯುವ ಪೀಳಿಗೆಗೆ ಪ್ರೇರಣೆಯಾಗಿದೆ. ನೀರಿನ ಸಮಸ್ಯೆಯನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ದೇಶದ ಜನರನ್ನು ಕಣ್ತೆರೆಸುವಲ್ಲಿ ಈ ಪ್ರಶಸ್ತಿ ಅರ್ಹವಾಗಿಯೇ ಮಹಾಲಿಂಗ ನಾಯ್ಕರನ್ನು ಹುಡುಕಿಕೊಂಡು ಬಂದಿದೆ ಎಂದರು.

ಮಹಾಲಿಂಗ ನಾಯ್ಕರದ್ದು ಮೌನ ಕ್ರಾಂತಿ. ಅವರು ವಾಸವಿದ್ದ ಗುಡ್ಡದಲ್ಲಿ ಬಾವಿ ತೋಡಿ ನೀರು ಸಿಗದಿದ್ದಾಗ ಅವರು ವಿಚಲಿತರಾಗದೆ ನಿರಂತರ ಶ್ರಮದಿಂದ ಅವರು ಕಲಿಯುಗದಲ್ಲಿ ಸುರಂಗವನ್ನು ಕೊರೆದು ಗಂಗೆಯನ್ನು ಭೂಮಿಗೆ ತರಿಸಿದ ಸಾಧನೆ ಎಲ್ಲರಿಗೂ ಸ್ಫೂರ್ತಿಯಾಗಿದೆ. ಇಂತಹ ಭಗೀರಥರನ್ನು ಕೇಂದ್ರ ಸರ್ಕಾರ ಗುರುತಿಸಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿರುವುದು ಸಂತೋಷದ ವಿಷಯ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಮಹಾಲಿಂಗ ನಾಯ್ಕ ಅವರು, ಇಂದು ನೀರಿಗಾಗಿ ಸಮಸ್ಯೆಗಳು ಹೆಚ್ಚಾಗುತ್ತಿರುವಂತೆಯೇ ಮುಂದಿನ ದಿನಗಳಲ್ಲಿ ನೀರು ಬಂಗಾರಕ್ಕಿಂತಲೂ ಹೆಚ್ಚು ಬೆಲೆ ಬಾಳಲಿದೆ. ಅದಕ್ಕಾಗಿ ನೀರಿನ ಮಹತ್ವವನ್ನು ಅರಿತು ಸಾರ್ವಜನಿಕರು ಮಿತವಾಗಿ ಉಪಯೋಗಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಲತಾ ಮಂಗೇಶ್ಕರ್‌ ಹಾಡು ಕೇಳಿ ವೇದಿಕೆಯಲ್ಲಿ ಕಣ್ಣೀರು ಹಾಕಿದ್ರು ಜವಾಹರ್‌ಲಾಲ್‌ ನೆಹರೂ

ಶಾಸಕ ವೇದವ್ಯಾಸ ಕಾಮತ್, ಶಾರದಾ ವಿದ್ಯಾಲಯದ ಮುಖ್ಯಸ್ಥ ಎಂ.ಬಿ. ಪುರಾಣಿಕ್, ಮೇಯರ್ ಪ್ರೇಮಾನಂದ ಶೆಟ್ಟಿ, ಕಸಾಪ ಮಾಜಿ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಸುಧಾಕರ ರಾವ್ ಪೇಜಾವರ ಉಪಸ್ಥಿತರಿದ್ದರು. ಇದನ್ನೂ ಓದಿ: ಲತಾ ಮಂಗೇಶ್ಕರ್‌ರ ಮೊದಲ ಹಾಡನ್ನು ಸಿನಿಮಾದಿಂದ ತೆಗೆಯಲಾಗಿತ್ತು – ನೀವು ತಿಳಿಯಲೇಬೇಕಾದ 10 ಸಂಗತಿಗಳು ಇಲ್ಲಿವೆ!

Share This Article
Leave a Comment

Leave a Reply

Your email address will not be published. Required fields are marked *