ಬಾಲಿವುಡ್‌ ನಟ ಗೋವಿಂದ ಸಂಸಾರದಲ್ಲಿ ಬಿರುಕು; ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ

Public TV
0 Min Read

ಬಾಲಿವುಡ್‌ ಹಿರಿಯ ನಟ ಗೋವಿಂದ (Actor Govinda) ಅವರ ಸಂಸಾರದಲ್ಲಿ ಬಿರುಕು ಮೂಡಿದೆ. ಗೋವಿಂದ ಅವರ ಪತ್ನಿ ಸುನೀತಾ ಅಹುಜಾ (Sunita Ahuja) ಅವರು ಬಾಂದ್ರಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಪ್ರೀತಿ ಮತ್ತು ವಿವಾಹದಲ್ಲಿ ಮೋಸ ಹಾಗೂ ಪ್ರತ್ಯೇಕವಾಗಿ ವಾಸಿಸುತ್ತಿದ್ದೇವೆ ಅಂತ ಕಾರಣ ಕೊಟ್ಟು ಸುನೀತಾ ಅವರು ವಿಚ್ಛೇದನ ಕೋರಿದ್ದಾರೆ. ಹಿಂದೂ ವಿವಾಹ ಕಾಯ್ದೆ 1955ರ ಸೆಕ್ಷನ್ 13 (1), (i), (ia), (ib) ಅಡಿಯಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇದನ್ನೂ ಓದಿ: ರಾಗಿಣಿ ಎಂಎಂಎಸ್-3ಗೆ ಮಿಲ್ಕಿ ಬ್ಯೂಟಿ ನಾಯಕಿ..!?

ಈ ಹಿಂದೆಯೇ ಅಹುಜಾ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ತಿಳಿದುಬಂದಿತ್ತು. ಮೇ 25ರಂದು ನ್ಯಾಯಾಲಯವು ಗೋವಿಂದ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಜೂನ್‌ನಿಂದ ಇಬ್ಬರೂ ವಿಚ್ಛೇದನ ಕುರಿತಂತೆ ಸಮಸ್ಯೆ ಬಗೆಹರಿಸಿಕೊಳ್ಳಲು ಪ್ರಯತ್ನಿಸಿದ್ದರು ಎನ್ನಲಾಗಿದೆ. ಆದರೆ, ವಿಚಾರಣೆ ಸಮಯದಲ್ಲಿ ಗೋವಿಂದ ಅವರು ಹಾಜರಾಗುತ್ತಿರಲಿಲ್ಲ. ಸುನೀತಾ ಅವರು ಹಾಜರಾಗುತ್ತಿದ್ದರು. ಇಬ್ಬರೂ ಮತ್ತೆ ಒಂದಾಗುತ್ತಿದ್ದಾರೆ ಎಂದೇ ಹೇಳಲಾಗಿತ್ತು.

ಈ ಜೋಡಿ 37 ವರ್ಷಗಳ ದಾಂಪತ್ಯವನ್ನು ಕೊನೆಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಸುನೀತಾ ತಮ್ಮ ಯೂಟ್ಯೂಬ್ ವ್ಲಾಗ್‌ನಲ್ಲಿ ವಿಚ್ಛೇದನದ ಬಗ್ಗೆ ಮಾತನಾಡಿದ ಕೆಲವು ವಾರಗಳ ನಂತರ ಈ ವರದಿ ಬಂದಿದೆ. ಸುನೀತಾ ಬಾಂದ್ರಾ ಅವರು ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಬಾಲಿವುಡ್‌ನಲ್ಲೂ ಜೂ.ಎನ್‌ಟಿಆರ್‌ಗೆ ಸೋಲು

ಗೋವಿಂದ ಮತ್ತು ಸುನೀತಾ 1987ರ ಮಾರ್ಚ್‌ 11 ರಂದು ಮದುವೆಯಾದರು. ದಂಪತಿಗೆ ಟೀನಾ ಅಹುಜಾ ಮತ್ತು ಯಶವರ್ಧನ್ ಅಹುಜಾ ಎಂಬ ಇಬ್ಬರು ಮಕ್ಕಳಿದ್ದಾರೆ. ಟೀನಾ 2015 ರಲ್ಲಿ ರೊಮ್ಯಾಂಟಿಕ್ ಕಾಮಿಡಿ ‘ಸೆಕೆಂಡ್ ಹ್ಯಾಂಡ್ ಹಸ್ಬೆಂಡ್‌’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು.

Share This Article