ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಕ್ಷಿಣ ಆಫ್ರಿಕಾದ ದೈತ್ಯ ಬ್ಯಾಟರ್‌ ಕ್ಲಾಸೆನ್‌ ಗುಡ್‌ಬೈ

Public TV
2 Min Read

ಮುಂಬೈ: ದಕ್ಷಿಣ ಆಫ್ರಿಕಾದ ದೈತ್ಯ ವಿಕೆಟ್‌ ಕೀಪರ್‌ ಬ್ಯಾಟರ್‌ ಹೆನ್ರಿಚ್‌ ಕ್ಲಾಸೆನ್‌ (Heinrich Klaasen) ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ (International Cricket) ನಿವೃತ್ತಿ ಘೋಷಿಸಿದ್ದಾರೆ ಹೇಳಿದ್ದಾರೆ.

ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ಗೆ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಇಂದು ಗ್ಲೆನ್‌ ಮ್ಯಾಕ್ಸ್‌ವೆಲ್‌ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ್ದರು. ಈ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕ್ಲಾಸೆನ್‌ ವಿದಾಯ ಹೇಳಿದ್ದಾರೆ. ಇದನ್ನೂ ಓದಿ: ಈ ವರ್ಷ ಟ್ರೋಫಿ ಗೆಲ್ಲೋಕೆ ಶ್ರೇಯಸ್‌ ಅಯ್ಯರ್‌ ಅರ್ಹರು – ರಾಜಮೌಳಿ

2024ರಲ್ಲೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದ ಕ್ಲಾಸೆನ್, ಇದೀಗ ಎಲ್ಲಾ ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದರೂ, ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಆಡುವ ಸಾಧ್ಯತೆಯಿದೆ.

ಬಲಗೈ ಬ್ಯಾಟ‌ರ್ ಕ್ಲಾಸೆನ್ 2018ರಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಪದಾರ್ಪಣೆ ಮಾಡಿದ್ದರು. ಆದ್ರೆ ಕುಟುಂಬದ ಜೊತೆಗೆ ಸಮಯ ಕಳೆಯುವ ಉದ್ದೇಶದಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದೆ. ಇದೊಂದು ಅತಿ ಕಷ್ಟದ ನಿರ್ಣಯವಾಗಿದ್ದು, ಬಹಳಷ್ಟು ಯೋಚನೆ ಮಾಡಿದ ನಂತರ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಏಕದಿನಕ್ಕೆ ಆಸೀಸ್‌ ಆಲ್‌ರೌಂಡರ್‌ ಮ್ಯಾಕ್ಸ್‌ವೆಲ್‌ ದಿಢೀರ್‌ ನಿವೃತ್ತಿ

ಸ್ಪೋಟಕ ಬ್ಯಾಟಿಂಗ್‌ನಿಂದಲೇ ಹೆಸರಾಗಿದ್ದ 33 ವರ್ಷದ ಕ್ಲಾಸೆನ್ ಅವರು ಏಕದಿನ ಕ್ರಿಕೆಟ್‌ನಲ್ಲಿ 60 ಪಂದ್ಯಗಳಿಂದ 2,141 ರನ್ ಹಾಗೂ 58 ಅಂತರರಾಷ್ಟ್ರೀಯ ಟಿ-20 ಪಂದ್ಯಗಳಲ್ಲಿ 141.8 ಡ್ರೈಕ್ ರೇಟ್‌ನಲ್ಲಿ ಸಾವಿರ ರನ್ ಗಳಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 4 ಶತಕ, 11 ಅರ್ಧಶತಕ ಸಿಡಿಸಿದ್ರೆ, ಟಿ20ನಲ್ಲಿ ಐದು ಅರ್ಧಶತಕಗಳನ್ನ ಸಿಡಿಸಿದ್ದಾರೆ.

ಕ್ಲಾಸೆನ್‌ ಅಂತಾರಾಷ್ಟ್ರೀಯ ಟಿ-20 ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನ ಮುನ್ನಡೆಸಿದ್ದರು. ನ್ಯೂಜಿಲೆಂಡ್ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಕೊನೆಯ ಬಾರಿ ಏಕದಿನ ಕ್ರಿಕೆಟ್‌ನಲ್ಲಿ ಕಾಣಿಸಿಕೊಂಡಿದ್ದರು. ಇದನ್ನೂ ಓದಿ: ಈ ಬಾರಿ ಐಪಿಎಲ್‌ನಲ್ಲಿ ಹೊಸ ಚಾಂಪಿಯನ್‌ – ಹಿಂದಿನ ಆರ್‌ಸಿಬಿ, ಪಂಜಾಬ್‌ ಫೈನಲ್‌ ಪಂದ್ಯಗಳು ಹೇಗಿತ್ತು?

ಐಪಿಎಲ್‌ನ 18ನೇ ಆವೃತ್ತಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪರ ಆಡಿದ್ದ ಕ್ಲಾಸೆನ್, ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಕೇವಲ 37 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಕಳೆದ ಬಾರಿ ಭರ್ಜರಿ ಪ್ರದರ್ಶನ ನೀಡಿದ ಕ್ಲಾಸೆನ್‌ ಅವರನ್ನು ಫ್ರಾಂಚೈಸಿ 23 ಕೋಟಿ ರೂ.ಗಳಿಗೆ ರಿಟೇನ್‌ ಮಾಡಿಕೊಂಡಿತ್ತು.

Share This Article