ಕಿಚ್ಚ ಸುದೀಪ್ ಅಳಿಯ ಸಂಚಿತ್ ಸಂಜೀವ್ ಸ್ಯಾಂಡಲ್‌ವುಡ್‌ಗೆ ಎಂಟ್ರಿ

Public TV
1 Min Read

ಕಿಚ್ಚ ಸುದೀಪ್ (Kiccha Sudeep) ಅವರ ಅಳಿಯ ಸಂಚಿತ್ ಸಂಜೀವ್ (Sanchith Sanjeev) ಅವರು ಸ್ಯಾಂಡಲ್‌ವುಡ್‌ಗೆ (Sandalwood) ಪಾದಾರ್ಪಣೆ ಮಾಡಲು ವೇದಿಕೆ ಸಜ್ಜಾಗಿದೆ. ದೊಡ್ಡ ಸಿನಿಮಾ ಮೂಲಕವೇ ಸಂಜಿತ್ ಪರಿಚಯವಾಗುತ್ತಿದ್ದಾರೆ. ಸಿನಿಮಾಗೆ ಮುಹೂರ್ತ ಕೂಡ ಫಿಕ್ಸ್ ಆಗಿದೆ.

ಸಾಕಷ್ಟು ಸಮಯದಿಂದ ಸಂಚಿತ್ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುವ ಬಗ್ಗೆ ಮಾತುಗಳು ಕೇಳಿಬರುತ್ತಿತ್ತು. ಇದೀಗ ಫೈನಲಿ ಅದಕ್ಕೆ ವೇದಿಕೆ ಸಿದ್ಧವಾಗಿದೆ. ಈಗಾಗಲೇ ಕಿಚ್ಚನ ‘ಅಂಬಿ ನಿಂಗೆ ವಯಸ್ಸಾಯ್ತೋ’, ‘ವಿಕ್ರಾಂತ್ ರೋಣ’ ಸಿನಿಮಾಗಳಲ್ಲಿ ಸಂಚಿತ್ ಕೆಲಸ ಮಾಡಿದ್ದರು. ಆದರೆ ಕ್ಯಾಮೆರಾ ಮುಂದೆ ಅಲ್ಲ ಹಿಂದೆ ಗುರುತಿಸಿಕೊಂಡಿದ್ದರು. ಸುದೀಪ್ ಸೋದರಳಿಯ ಮುಂಬೈನಲ್ಲಿ ನಟನೆಯನ್ನು ಕೂಡ ಕಲಿತು ಬಂದಿದ್ದಾರೆ. ಇದನ್ನೂ ಓದಿ:ಐವತ್ತನೇ ದಿನದ ಸಂಭ್ರಮದಲ್ಲಿ ಬಿಸಿಲು ಕುದುರೆ

ಸಕಲ ತಯಾರಿಯೊಂದಿಗೆ ಸಂಚಿತ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ವಿಶೇಷ ಅಂದ್ರೆ ತಾವು ನಟಿಸುವ ಚೊಚ್ಚಲ ಚಿತ್ರವನ್ನು ತಾವೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಜೊತೆ ಕೆ.ಪಿ ಶ್ರೀಕಾಂತ್, ಮನೋಹರ್ ನಾಯ್ಡು ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಶ್ರೀಕಾಂತ್ ಮಾಹಿತಿ ನೀಡಿದ್ದಾರೆ. ಸಂಚಿತ್ ಸಿನಿಮಾ ಬಗ್ಗೆ ಅಧಿಕೃತವಾಗಿ ಜೂನ್ 14ರಂದು ಘೋಷಣೆ ಮಾಡಿದ್ದಾರೆ.

ಲಹರಿ ಸಂಸ್ಥೆಯ (Lahari Films) ಮನೋಹರ್ ನಾಯ್ಡು, ವೀನಸ್ ಮೂವಿಸ್‌ನ ಕೆ. ಪಿ ಶ್ರೀಕಾಂತ್ ಈಗಾಗಲೇ 2 ಸಿನಿಮಾ ನಿರ್ಮಿಸ್ತಿದ್ದಾರೆ. ಉಪೇಂದ್ರ ನಟನೆಯ ‘ಯುಐ’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಇನ್ನು ಸೆಟ್ಟೇರಿ ನಿಂತೇ ಹೋಗಿದ್ದ ವಿನಯ್ ರಾಜ್‌ಕುಮಾರ್ ನಟನೆಯ ‘ಗ್ರಾಮಾಯಣ’ ಮರುಜೀವ ಕೊಟ್ಟಿದ್ದಾರೆ. ಜೂನ್ 15ರ ಗುರುವಾರ ಈ ಚಿತ್ರದ ಮುಹೂರ್ತ ಸಮಾರಂಭ ನಡೆಯಲಿದೆ.

ತಮ್ಮ ಮೊದಲ ಸಿನಿಮಾದಲ್ಲೇ ನಟನೆಯ ಜೊತೆ ನಿರ್ದೇಶನ (Direction) ಕೂಡ ಸಂಚಿತ್ ಮಾಡ್ತಿದ್ದಾರೆ. ಈ ಮೂಲಕ ಚಿತ್ರರಂಗಕ್ಕೆ ಯುವನಟ ಸಂಚಿತ್ ಹೆಜ್ಜೆ ಇಡ್ತಿದ್ದಾರೆ. ಇದೊಂದು ಕ್ರೈಂ ಡ್ರಾಮಾ ಆಗಿದ್ದು, ತಂದೆ-ಮಗನ ಬಾಂಧವ್ಯವನ್ನು ಸಾರುವ ಕಥೆಯನ್ನ ಈ ಚಿತ್ರದ ಮೂಲಕ ತೋರಿಸಲಿದ್ದಾರೆ.

Share This Article