ಸಪ್ಲೇಯರ್ ಶಂಕರ್ ಜೀವನ ಕಥನದ ಟೀಸರ್ ರಿಲೀಸ್

Public TV
2 Min Read

ಎಂ. ಚಂದ್ರಶೇಖರ್ ಹಾಗೂ ಎಂ.ನಾಗೇಂದ್ರ ಸಿಂಗ್ ನಿರ್ಮಿಸಿರುವ ಹಾಗೂ ರಂಜಿತ್ (Ranjith) ನಿರ್ದೇಶನದಲ್ಲಿ ನಿಶ್ಚಿತ್ ಕರೋಡಿ (Nischith Karodi) ನಾಯಕನಾಗಿ ನಟಿಸಿರುವ ‘ಸಪ್ಲೇಯರ್ ಶಂಕರ’ (Supplier Shankar) ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರದ ನಿರ್ಮಾಪಕರಾದ ಚಂದ್ರಶೇಖರ್ ಹಾಗೂ ನಾಗೇಂದ್ರ ಸಿಂಗ್ ಈ ಚಿತ್ರದ  ಟೀಸರ್ ಬಿಡುಗಡೆ ಮಾಡಿದರು. ನಿರ್ದೇಶಕ ರಂಜಿತ್ ಹೇಳಿದ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆವು. ಚಿತ್ರ ಈಗ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ತೆರೆಗೆ ತರುತ್ತೇವೆ ಎಂದು ನಿರ್ಮಾಪಕರಾದ ಚಂದ್ರಶೇಖರ್ ಹಾಗೂ ನಾಗೇಂದ್ರ ಸಿಂಗ್ ತಿಳಿಸಿದರು.

ಕಳೆದ ವರ್ಷ ಫೆಬ್ರವರಿಯಲ್ಲಿ ಈ ಚಿತ್ರಕ್ಕೆ ಚಾಲನೆ ದೊರೆಯಿತು ಎಂದು ಮಾತು ಪ್ರಾರಂಭಿಸಿದ ನಿರ್ದೇಶಕ ರಂಜಿತ್, ‘ಸಪ್ಲೇಯರ್ ಶಂಕರ’ ಬಾರ್ ಸಪ್ಲೇಯರ್ ಒಬ್ಬನ ಕಥೆ. ನಾನೇ ಕಥೆ ಬರೆದಿದ್ದೇನೆ. ಇದು ನನ್ನ ಮೊದಲ ನಿರ್ದೇಶನದ ಚಿತ್ರ.  ಈ ಪಾತ್ರಕ್ಕಾಗಿ ನಾಯಕ ನಿಶ್ಚಿತ್ ಕರೋಡಿ ಬಹಳ ಶ್ರಮಪಟ್ಟಿದ್ದಾರೆ. ನನ್ನ ಕಥೆಗೆ ಜೀವ ತುಂಬಿದ್ದು ನಿರ್ಮಾಪಕರಾದ ಚಂದ್ರಶೇಖರ್ ಹಾಗೂ ನಾಗೇಂದ್ರ ಸಿಂಗ್. ಈ ಚಿತ್ರದಲ್ಲಿ ಹೆಚ್ಚಾಗಿ ಹೊಸತಂಡ ಕಾರ್ಯ ನಿರ್ವಹಿಸಿದೆ. ಇಂದು ಟೀಸರ್ ಬಿಡುಗಡೆಯಾಗಿದೆ. ಶೀಘ್ರದಲ್ಲೇ ಸಪ್ಲೇಯರ್ ಶಂಕರ ನಿಮ್ಮ ಮೆಚ್ಚಿನ ಚಿತ್ರಮಂದಿರಗಳಿಗೆ ಬರುತ್ತಾನೆ ಎಂದರು‌.

ನಾನು ಈ ಹಿಂದೆ ‘ಗಂಟು ಮೂಟೆ’ ಹಾಗೂ ‘ಟಾಮ್ & ಜೆರ್ರಿ’ ಚಿತ್ರಗಳಲ್ಲಿ ನಟಿಸಿದ್ದೆ. ಇದು ಮೂರನೇ ಚಿತ್ರ. ಬಾರ್ ಸಪ್ಲೇಯರ್ ಪಾತ್ರ ನನ್ನದು. ಹಾಗಾಂತ ಈ ಚಿತ್ರದಲ್ಲಿ ಬರೀ ಸಪ್ಲೇಯರ್ ಕಥೆ ಮಾತ್ರ ಇಲ್ಲ. ಕಾಮಿಡಿ, ಸೆಂಟಿಮೆಂಟ್, ಲವ್, ಥ್ರಿಲ್ಲರ್ ಎಲ್ಲವೂ ಇದೆ. ನಿರ್ದೇಶಕ ರಂಜಿತ್ ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಾಯಕ ನಿಶ್ಚಿತ್ ಕರೋಡಿ.

ಶಿಕ್ಷಕಿ ಪಾತ್ರ ನಿರ್ವಹಿಸಿರುವುದಾಗಿ ನಾಯಕಿ ದೀಪಿಕಾ ಆರಾಧ್ಯ ಹೇಳಿದರು. ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಆರ್ ಬಿ ಭರತ್ ಮಾಹಿತಿ ನೀಡಿದರು. ಛಾಯಾಗ್ರಾಹಕ ಸತೀಶ್ ಕುಮಾರ್, ಸಂಕಲನಕಾರ ಸತೀಶ್ ಚಂದ್ರಯ್ಯ ಮುಂತಾದವರು ಸಪ್ಲೇಯರ್ ಶಂಕರ ಚಿತ್ರದ ಕುರಿತು ಮಾತನಾಡಿದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್