ಬೆಂಗಳೂರು: ಸುಪ್ರೀಂ ಕೋರ್ಟ್‌ನಿಂದ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್ (Darshan) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಇದ್ದ ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ದರ್ಶನ್ ಅವರು ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎಂಬ ಸುದ್ದಿ ಬಂದಿತ್ತು. ಆದರೆ ಪೊಲೀಸರು ದರ್ಶನ್ ನ್ಯಾಯಾಲಯಕ್ಕೆ ಶರಣಾಗುವ ಮೊದಲೇ ಪೊಲೀಸರು ಅಪಾರ್ಟ್‌ಮೆಂಟ್‌ಗೆ ತೆರಳಿ ಅವರನ್ನು ಅರೆಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ನಟ ದರ್ಶನ್ ಜಾಮೀನು ರದ್ದು – ಸುಪ್ರೀಂ ಕೋರ್ಟ್ ತೀರ್ಪಿನಲ್ಲೇನಿದೆ?
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿಯಾಗಿದ್ದಾರೆ. ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರನ್ನು ಈ ಮೊದಲೇ ಪೊಲೀಸರು ಅರೆಸ್ಟ್ ಮಾಡಿದ್ದರು. ಇದನ್ನೂ ಓದಿ: ಜಾಮೀನು ರದ್ದು ಬೆನ್ನಲ್ಲೇ ದರ್ಶನ್ ಆಪ್ತ ಪ್ರದೂಷ್ ಅರೆಸ್ಟ್