ತಮಿಳುನಾಡು ಸರ್ಕಾರ, ಉದಯನಿಧಿ ಸ್ಟಾಲಿನ್‍ಗೆ ಸುಪ್ರೀಂ ಕೋರ್ಟ್ ನೋಟಿಸ್

By
1 Min Read

ನವದೆಹಲಿ: ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್‍ಗೆ ಸುಪ್ರೀಂ ಕೋರ್ಟ್ (Supreme Court) ನೋಟಿಸ್ ನೀಡಿದೆ.

ತಮಿಳುನಾಡು ಸರ್ಕಾರ, ಉದಯನಿಧಿ ಸ್ಟಾಲಿನ್ (Udhayanidhi Stalin), ಸಿಬಿಐ, ಎ ರಾಜಾ ಮತ್ತು ಇತರ ಪಕ್ಷಗಳಿಗೆ ಕೂಡ ನೋಟಿಸ್ ಜಾರಿಗೊಳಿಸಿ ಕೋರ್ಟ್ ಪ್ರತಿಕ್ರಿಯೆ ಕೇಳಿದೆ. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್ ವಿರುದ್ಧ ಮುಂಬೈನಲ್ಲಿ ಎಫ್‌ಐಆರ್ ದಾಖಲು

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಿ ಎಂಬ ಹೇಳಿಕೆಗಾಗಿ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಿರುವ ಮನವಿಗೆ ನ್ಯಾಯಾಲಯ ಈ ನೋಟಿಸ್ ಜಾರಿ ಮಾಡಿದೆ. ಅರ್ಜಿದಾರರ ಮನವಿಯಲ್ಲಿ ಒಟ್ಟು 14 ಕಕ್ಷಿದಾರರನ್ನು ಸೇರಿಸಲಾಗಿದೆ. ಇವುಗಳಲ್ಲಿ ತಮಿಳುನಾಡು ಸರ್ಕಾರದ ವಿವಿಧ ಇಲಾಖೆಗಳು, ಡಿಜಿಪಿ, ಪೊಲೀಸ್ ಕಮಿಷನರ್, ಸಿಬಿಐ ಮತ್ತು ಇತರರು ಸೇರಿದ್ದಾರೆ.

ತಮಿಳುನಾಡು (Tamilnadu) ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಸೆಪ್ಟೆಂಬರ್ 2 ರಂದು ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಮಾತನಾಡಿ, ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ, ಅದನ್ನು ಮಾತ್ರ ರದ್ದುಗೊಳಿಸಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾವನ್ನು ವಿರೋಧಿಸಲು ಸಾಧ್ಯವಿಲ್ಲ. ನಾವು ಇದನ್ನು ನಿರ್ಮೂಲನೆ ಮಾಡಬೇಕು. ನಾವು ಸನಾತನವನ್ನು ಹೇಗೆ ನಿರ್ಮೂಲನೆ ಮಾಡಬೇಕು ಎಂದು ಅವರು ಹೇಳಿದ್ದರು.

ಸನಾತನವನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಬೇಕು. ಸನಾತನ ಎಂಬ ಹೆಸರು ಸಂಸ್ಕೃತದಿಂದ ಬಂದಿದೆ. ಇದು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಎಂದು ಆಡಳಿತಾರೂಢ ಡಿಎಂಕೆ ಸರ್ಕಾರದಲ್ಲಿ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದರು.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್