ಜಮ್ಮು ಕಾಶ್ಮೀರದ ಪೇದೆಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ – ಸಿಬಿಐ ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್

Public TV
1 Min Read

– ಹಿಂಸೆ ನೀಡಿದವರನ್ನು ಬಂಧಿಸಿ, ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ
– ಪೇದೆಗೆ 50 ಲಕ್ಷ ಪರಿಹಾರ ನೀಡಲು ಸರ್ಕಾರಕ್ಕೆ ಸೂಚನೆ

ನವದೆಹಲಿ: 2023 ರಲ್ಲಿ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಪ್ವಾರಾದಲ್ಲಿ ವಿಚಾರಣೆ ವೇಳೆ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ನಡೆದ‌ ಕಸ್ಟಡಿ ಚಿತ್ರಹಿಂಸೆ (Custodial Violence) ಪ್ರಕರಣವನ್ನು ಸುಪ್ರೀಂ ಕೋರ್ಟ್‌ (Supreme Court) ಕೇಂದ್ರ ತನಿಖಾ ದಳದ (CBI) ತನಿಖೆಗೆ ಆದೇಶಿಸಿದೆ.

ಕಸ್ಟಡಿ ಹಿಂಸಾಚಾರದಲ್ಲಿ ಭಾಗಿಯಾದ ಆರೋಪಿ ಅಧಿಕಾರಿಗಳನ್ನು ಒಂದು ತಿಂಗಳೊಳಗೆ ಬಂಧಿಸಬೇಕು. ಅಲ್ಲದೇ ತನಿಖೆಯನ್ನು ಒಂದೇ ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ ಆದೇಶಿಸಿದೆ. ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್ ಪ್ರಕರಣ – ಕ್ಷಮೆಯಾಚಿಸಿದ ಪೊಲೀಸ್ ಮುಖ್ಯಸ್ಥ

ಕಾನ್ಸ್‌ಟೇಬಲ್‌ ಖುರ್ಷೀದ್ ಅಹ್ಮದ್ ಚೋಹನ್, ತಮ್ಮನ್ನು 2023 ರಲ್ಲಿ ಕುಪ್ವಾರಾದಲ್ಲಿ ಹಲವಾರು ದಿನಗಳ ಕಾಲ ಅಕ್ರಮವಾಗಿ ಬಂಧಿಸಲಾಗಿತ್ತು. ಈ ಸಮಯದಲ್ಲಿ ಖಾಸಗಿ ಭಾಗಗಳನ್ನು ವಿರೂಪಗೊಳಿಸುವುದು ಸೇರಿದಂತೆ, ಅಮಾನವೀಯವಾಗಿ ಅಧಿಕಾರಿಗಳು ವರ್ತಿಸಿದ್ದರು ಎಂದು ಆರೋಪಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಇದೇ ವೇಳೆ ಚೋಹನ್ ವಿರುದ್ಧದ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 309 (ಆತ್ಮಹತ್ಯೆ ಯತ್ನ) ಅಡಿಯ ಆರೋಪ ರದ್ದುಗೊಳಿಸಲು ನಿರಾಕರಿಸಿದ್ದ ಹೈಕೋರ್ಟ್ ತೀರ್ಪನ್ನು ಸುಪ್ರೀಂ ರದ್ದುಗೊಳಿಸಿದೆ. ಅಲ್ಲದೇ ಅವರಿಗೆ 50 ಲಕ್ಷ ರೂ. ಪರಿಹಾರವನ್ನು ನೀಡಲು ಜಮ್ಮು ಮತ್ತು ಕಾಶ್ಮೀರ ಸರ್ಕಾರಕ್ಕೆ ಆದೇಶಿಸಲಾಗಿದೆ. ಇದನ್ನೂ ಓದಿ: ತಮಿಳುನಾಡು ಲಾಕಪ್‌ ಡೆತ್‌ ಕೇಸ್‌ – ಹಲ್ಲೆ ನಡೆಸಿದ್ದ ಪೊಲೀಸರ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಸಿಬಿಐ

Share This Article