ಪಾಟ್ನಾ: ಬಿಹಾರ (Bihar) ಮತದಾರರ ಪಟ್ಟಿ ನವೀಕರಣ ಪ್ರಕ್ರಿಯೆಗೆ ಮಧ್ಯಂತರ ತಡೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪಟ್ಟಿ ನವೀಕರಣ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ (Supreme Court) ಸಮ್ಮತಿ ಸೂಚಿಸಿದೆ.
ಇದೇ ಜು.10 ರಂದು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಲಿದೆ. ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮೊದಲು ಮತದಾರರ ಪಟ್ಟಿಗಳ ಪರಿಷ್ಕರಣೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಅರ್ಜಿಗಳನ್ನು ಸಲ್ಲಿಸಲಾಗಿದೆ. ಇದನ್ನೂ ಓದಿ: ನಾನು ಪಾಕಿಸ್ತಾನಿ ಸೇನೆಯ ವಿಶ್ವಾಸಾರ್ಹ ಏಜೆಂಟ್ – ಮುಂಬೈ ದಾಳಿಯ ಸಂಚುಕೋರ ರಾಣಾ ತಪ್ಪೊಪ್ಪಿಗೆ
ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಸಂಸದ ಮನೋಜ್ ಝಾ, ಪೋಲ್ ವಾಚ್‌ಡಾಗ್ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್, ಹಕ್ಕುಗಳ ಸಂಸ್ಥೆ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್, ಕಾರ್ಯಕರ್ತ ಯೋಗೇಂದ್ರ ಯಾದವ್, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಮತ್ತು ಮಾಜಿ ಶಾಸಕ ಮುಜಾಹಿದ್ ಆಲಂ ಅರ್ಜಿ ಸಲ್ಲಿಸಿದ್ದರು.
ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಸಿಂಘ್ವಿ, ಶಾದನ್ ಫರಾಸತ್ ಮತ್ತು ಗೋಪಾಲ್ ಶಂಕರನಾರಾಯಣನ್ ಅವರು ತುರ್ತು ವಿಚಾರಣೆಯನ್ನು ಕೋರಿದರು. ಪರಿಷ್ಕರಣೆ ಕಾರ್ಯವು ಮತದಾರರ ಪಟ್ಟಿಯಿಂದ ಲಕ್ಷಾಂತರ ಹೆಸರುಗಳನ್ನು ತೆಗೆದುಹಾಕಲು ಕಾರಣವಾಗುತ್ತದೆ. ಮಹಿಳೆಯರು ಮತ್ತು ಹಿಂದುಳಿದವರು ಹೆಚ್ಚು ತೊಂದರೆಗೊಳಗಾಗುತ್ತಾರೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಖಲಿಸ್ತಾನಿ ಭಯೋತ್ಪಾದಕ ಹ್ಯಾಪಿ ಪಾಸಿಯಾ ಭಾರತಕ್ಕೆ ಹಸ್ತಾಂತರ ಪ್ರಕ್ರಿಯೆ ಶುರು