ವಿಪಕ್ಷಗಳ ಮೈತ್ರಿಯಲ್ಲಿರುವ INDIA ಹೆಸರನ್ನು ನಿರ್ಬಂಧಿಸಿ – ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

Public TV
2 Min Read

ನವದೆಹಲಿ: ವಿರೋಧ ಪಕ್ಷಗಳ ಒಕ್ಕೂಟಕ್ಕೆ ಐಎನ್‌ಡಿಐಎ (INDIA) ಎಂದು ನಾಮಕರಣ ಮಾಡಿದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ (Supreme Court) ನಿರಾಕರಿಸಿದೆ.

26 ರಾಜಕೀಯ ಪಕ್ಷಗಳ ಮೈತ್ರಿಗೆ ನೀಡಿರುವ INDIA ಹೆಸರನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ಇಂದು ನ್ಯಾ. ಎಸ್‌ಕೆ ಕೌಲ್ ನೇತೃತ್ವದ ಪೀಠದಲ್ಲಿ ನಡೆಯಿತು.

ಈ ವೇಳೆ ಯಾರು ನೀವು? ಆಸಕ್ತಿ ಏನು? ಚುನಾವಣಾ ನಿಯಮಾವಳಿಗಳನ್ನು ಉಲ್ಲಂಘಿಸಿದರೆ ಚುನಾವಣಾ ಆಯೋಗಕ್ಕೆ (Election commission) ಹೋಗಿ. ನಿಮಗೆ ಸಂಪೂರ್ಣ ಪ್ರಚಾರ ಬೇಕು ಎಂದು ಅಭಿಪ್ರಾಯಪಟ್ಟು ಚಾಟಿ ಬೀಸಿತು.

ಇದಕ್ಕೆ ಅರ್ಜಿದಾರರ ಪರ ವಕೀಲರು, ಪ್ರಚಾರ ಬೇಕಿದ್ದರೆ ಮಾಧ್ಯಮ ಸಂಸ್ಥೆಗಳಿಗೆ ಸಂದರ್ಶನ ನೀಡುತ್ತಿದ್ದರು. ಆದರೆ ಅವರು ಅವುಗಳಿಂದ ದೂರವಿದ್ದಾರೆ ಎಂದು ಆಕ್ಷೇಪಿಸಿದರು.

ಹೆಸರನ್ನು ಬಳಸುವುದು ನೈತಿಕತೆಗೆ ವಿರುದ್ಧವಾಗಿದೆ ಎಂದು ಅರ್ಜಿದಾರರ ವಾದಕ್ಕೆ ನ್ಯಾ. ಕೌಲ್, ನಾವು ರಾಜಕೀಯದಲ್ಲಿ ನೈತಿಕತೆಯನ್ನು ನಿರ್ಧರಿಸಲು ಹೋಗುವುದಿಲ್ಲ ಎಂದು ಉತ್ತರಿಸಿ ಭಾರತೀಯ ಚುನಾವಣಾ ಆಯೋಗದ ಮುಂದೆ ಅರ್ಜಿಗಳನ್ನು ಸಲ್ಲಿಸಿ ಎಂದು ಸೂಚಿಸಿತು. ಸುಪ್ರೀಂ ಸೂಚನೆಯ ಬೆನ್ನಲ್ಲೇ ಅರ್ಜಿದಾರರು ಅರ್ಜಿಯನ್ನು ಹಿಂದಕ್ಕೆ ಪಡೆದರು. ಇದನ್ನೂ ಓದಿ: ಗೃಹಿಣಿ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಆರೋಪ

ಈ ಮಧ್ಯೆ ವಿರೋಧ ಪಕ್ಷಗಳ ಒಕ್ಕೂಟಕ್ಕೆ ನೀಡಲಾಗಿರುವ ʼಇಂಡಿಯಾʼ ಹೆಸರನ್ನು ಮಾಧ್ಯಮಗಳಲ್ಲಿ ಬಳಸದಂತೆ ಆದೇಶ ನೀಡಲು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಕ್ಕೆ ನಿರ್ದೇಶನಗಳನ್ನು ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಕೆಯಾಗಿದೆ.

ಹೈಕೋರ್ಟ್‌ನಲ್ಲಿದೆ ಅರ್ಜಿ:
ವಿರೋಧ ಪಕ್ಷಗಳ ಒಕ್ಕೂಟಕ್ಕೆ ಇಂಡಿಯಾ ಎಂದು ನಾಮಕರಣ ಮಾಡಿದ ನಿರ್ಧಾರವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಈಗಾಗಲೇ ಸಲ್ಲಿಕೆಯಾಗಿದೆ. ಆ.4 ರಂದು ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಂಜೀವ್ ನರುಲಾ ಅವರ ವಿಭಾಗೀಯ ಪೀಠ 26 ವಿರೋಧ ಪಕ್ಷಗಳು, ಕೇಂದ್ರ ಸರ್ಕಾರ ಮತ್ತು ಕೇಂದ್ರ ಚುನಾವಣಾ ಆಯೋಗಕ್ಕೆ (Central Election Commission) ನೋಟಿಸ್ ನೀಡಿ ಅಕ್ಟೋಬರ್ 31 ರಂದು ವಿಚಾರಣೆ ಮುಂದೂಡಿದೆ.

 

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್