ಪಟಾಕಿ ನಿಷೇಧಿಸಿದರೆ ನಿರ್ದಿಷ್ಟ ಸಮುದಾಯ ವಿರೋಧಿ ಎಂದರ್ಥವಲ್ಲ- ಸುಪ್ರೀಂ ಕೋರ್ಟ್‌

Public TV
1 Min Read

ನವದೆಹಲಿ: ಪಟಾಕಿಯನ್ನು ನಿಷೇಧಿಸುವುದು ನಿರ್ದಿಷ್ಟ ಗುಂಪು ಅಥವಾ ಸಮುದಾಯಕ್ಕೆ ವಿರುದ್ಧವಾದದ್ದು ಎಂಬ ಅಭಿಪ್ರಾಯವನ್ನು ಸುಪ್ರೀಂ ಕೋರ್ಟ್‌ ತಳ್ಳಿಹಾಕಿದೆ. ಸಂಭ್ರಮದ ನೆಪದಲ್ಲಿ ನಾಗರಿಕರ ಹಕ್ಕುಗಳ ಉಲ್ಲಂಘನೆಗೆ ಅವಕಾಶ ನೀಡಲಾಗುವುದಿಲ್ಲ ಎಂದು ಕೋರ್ಟ್‌ ಸ್ಪಷ್ಟಪಡಿಸಿದೆ.

fireworks

ಗುರುವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಆರ್‌.ಷಾ ಮತ್ತು ಎ.ಎಸ್‌.ಬೋಪಣ್ಣ ಅವರಿದ್ದ ಪೀಠವು, ತನ್ನ ಆದೇಶಗಳ ಸಂಪೂರ್ಣ ಅನುಷ್ಠಾನವನ್ನು ಬಯಸುತ್ತದೆ ಎಂದು ಸ್ಪಷ್ಟಪಡಿಸಿತು. ಇದನ್ನೂ ಓದಿ: ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‍ಗೆ ಜಾಮೀನು ಮಂಜೂರು

ಸಂಭ್ರಮದ ನೆಪವನ್ನು ಮುಂದಿಟ್ಟು ನೀವು (ತಯಾರಕರು) ನಾಗರಿಕರ ಜೀವನದಲ್ಲಿ ಆಟವಾಡುವುದು ಸರಿಯಲ್ಲ. ನಾವು ಯಾವುದೇ ಸಮುದಾಯದ ವಿರುದ್ಧವಿಲ್ಲ. ನಾಗರಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸಲು ನಾವಿದ್ದೇವೆ ಎಂಬ ಸ್ಪಷ್ಟ ಸಂದೇಶ ನೀಡುತ್ತಿದ್ದೇವೆ ಎಂದು ನ್ಯಾಯಾಲಯ ಹೇಳಿದೆ.

ಈ ಹಿಂದೆ ಪಟಾಕಿ ನಿಷೇಧ ಆದೇಶವನ್ನು ವಿಸ್ತೃತ ಕಾರಣಗಳನ್ನು ನೀಡಿದ ನಂತರ ಜಾರಿಗೊಳಿಸಲಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

FIREWORKS

ಎಲ್ಲ ಪಟಾಕಿಗಳನ್ನು ನಿಷೇಧಿಸಿಲ್ಲ. ಸಾರ್ವಜನಿಕ ಹಿತದೃಷ್ಟಿಯಿಂದ ಅನಿಸಿಕೆ ವ್ಯಕ್ತವಾಗಿದೆ. ಇದನ್ನು ನಿರ್ದಿಷ್ಟ ಉದ್ದೇಶಕ್ಕಾಗಿ ನಿಷೇಧಿಸಲಾಗಿದೆ ಎಂದು ಬಿಂಬಿಸಬಾರದು ಎಂದು ಕೋರ್ಟ್‌ ಹೇಳಿದೆ.

ಇಂದಿಗೂ ಪಟಾಕಿಗಳು ಮಾರುಕಟ್ಟೆಯಲ್ಲಿ ಮುಕ್ತವಾಗಿ ಲಭ್ಯವಿವೆ ಎಂದು ಪೀಠ ಹೇಳಿದೆ. ಇದನ್ನೂ ಓದಿ: ಬಿಸಿಲಿಗೆ ತಲೆ ಸುತ್ತಿ ಬಿದ್ದ ವಿದ್ಯಾರ್ಥಿಗಳು – ಹಾಡಿಗೆ ನೃತ್ಯ ಮಾಡಿದ ಅಧಿಕಾರಿಗಳು

ಜನರ ಹಕ್ಕುಗಳ ರಕ್ಷಣೆಗೆ ನಾವಿದ್ದೇವೆಂಬ ಸಂದೇಶವನ್ನು ನೀಡುತ್ತಿದ್ದೇವೆ. ಶೇ. 100 ಪಟಾಕಿಗಳನ್ನು ನಿಷೇಧಿಸಲು ಸಾಧ್ಯವಿಲ್ಲ. ಆದರೆ ದೆಹಲಿಯಲ್ಲಿ ವಾಯುಮಾಲಿನ್ಯದಿಂದಾಗಿ ಜನರು ಎಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆಂಬುದು ಎಲ್ಲರಿಗೂ ತಿಳಿದಿದೆ ಎಂದು ಪೀಠ ಎಚ್ಚರಿಸಿತು.

ಪೀಠವು  ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ

ಪಟಾಕಿ ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಲು ಈ ಹಿಂದೆ ಸುಪ್ರೀಂ ಕೋರ್ಟ್‌ ನಿರಾಕರಿಸಿತ್ತು. ಪರವಾನಗಿ ಹೊಂದಿರುವ ವ್ಯಾಪಾರಿಗಳು ಮಾತ್ರ ಮಾರಾಟ ಮಾಡಬಹುದು, ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬಹುದು ಎಂದು ಈಗ ತಿಳಿಸಿದೆ. ಆನ್‌ಲೈನ್‌ನಲ್ಲಿ ಪಟಾಕಿ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *