ನವದೆಹಲಿ: ಮೈಸೂರು ದಸರಾ (Mysuru Dasara) ಉದ್ಘಾಟನೆಗೆ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ (Banu Mushtaq) ಅವರನ್ನು ಆಯ್ಕೆ ಮಾಡಿದ ವಿಚಾರ ಈಗ ಸುಪ್ರೀಂ ಕೋರ್ಟ್ (Supreme Court) ಅಂಗಳಕ್ಕೆ ತಲುಪಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಹೆಚ್‌ಎಸ್ ಗೌರವ್ ಎಂಬವರು ಸುಪ್ರೀಂನಲ್ಲಿ ಪ್ರಶ್ನಿಸಿದ್ದಾರೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ಇವರು ಇದೆ 22 ರಂದು ದಸರಾ ಉದ್ಘಾಟನೆ ನಡೆಯಲಿದೆ. ಹೀಗಾಗಿ ತುರ್ತು ಅರ್ಜಿ ವಿಚಾರಣೆ ಮಾಡಬೇಕೆಂದು ಸಿಜೆಐ ಗವಾಯಿ ಮುಂದೆ ಮನವಿ ಮಾಡಿದ್ದಾರೆ. ಅರ್ಜಿಯನ್ನು ಪುರಸ್ಕರಿಸಿದ ಕೋರ್ಟ್ ಶುಕ್ರವಾರ ನಡೆಸುವುದಾಗಿ ಹೇಳಿದೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ಏನಾಗಿತ್ತು?
ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಸೇರಿದಂತೆ ಮೂವರು ಸಲ್ಲಿಸಿದ್ದ ಅರ್ಜಿಗಳನ್ನು ಸೆ.15 ರಂದು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ನೇತೃತ್ವದ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತ್ತು. ಇದನ್ನೂ ಓದಿ: ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ: ಸುದ್ದಿಗೋಷ್ಠಿಯಲ್ಲಿ ರಾಹುಲ್ ಗಾಂಧಿ ಗಂಭೀರ ಆರೋಪ
ರಾಜ್ಯ ಸರ್ಕಾರ ಆಯೋಜಿಸುವ ಕಾರ್ಯಕ್ರಮದಲ್ಲಿ ಭಿನ್ನ ಧರ್ಮದ ವ್ಯಕ್ತಿ ಭಾಗಿಯಾಗುವುದು, ಅರ್ಜಿದಾರರ ಯಾವುದೇ ಕಾನೂನು ಅಥವಾ ಸಾಂವಿಧಾನಿಕ ಹಕ್ಕನ್ನು ಹೇಗೆ ಉಲ್ಲಂಘಿಸುತ್ತದೆ? ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳಿಗೆ ವಿರುದ್ಧ ಹೇಗೆ ಎಂಬುದನ್ನು ಸಾಬೀತುಪಡಿಸುವಲ್ಲಿ ಅರ್ಜಿದಾರರು ವಿಫಲವಾಗಿದ್ದಾರೆ ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿತ್ತು.
ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಲು ನಿಮಗೆ ಸಾಂವಿಧಾನಿಕ ಮತ್ತು ಕಾನೂನಾತ್ಮಕ ಹಕ್ಕು ಏನಿದೆ ಹೇಳಿ? ಶಿಷ್ಟಾಚಾರ ಪಾಲಿಸುವುದು ಬಾನು ಮುಷ್ತಾಕ್ ಅವರಿಗೆ ಸೇರಿದ ವಿಚಾರ. ವಿಜಯದಶಮಿ ಎಂದರೇನು? ಕೆಟ್ಟದರ ವಿರುದ್ಧ ಒಳ್ಳೆಯದರ ವಿಜಯ ಅಲ್ವಾ? ಈ ಹಬ್ಬವನ್ನು ದೇಶಾದ್ಯಂತ ಆಚರಿಸಲಾಗುತ್ತದೆ .
ಈ ವೇಳೆ ವಾದಕ್ಕೆ ಮುಂದಾದ ಪ್ರತಾಪ್ ಸಿಂಹ ವಕೀಲ ಸುದರ್ಶನ್ ಮುಂದಾದಾಗ ನೀವು ಹೀಗೇ ವಾದಿಸಿದರೆ ಆದೇಶ ಆಗಿದೆ. ದಂಡ ವಿಧಿಸ್ಬೇಕಾ ಎಂದು ಕಟುವಾಗಿ ಪ್ರಶ್ನಿಸಿ ಈ ನ್ಯಾಯಾಲಯದಲ್ಲಿ ನೀವು ಹೀಗೆಲ್ಲಾ ಮಾಡಲಾಗದು ಎಂದು ಹೇಳಿತು.