ಧನುಷ್ ನಿರ್ದೇಶನದ ಚಿತ್ರದಲ್ಲಿ ಸೂರ್ಯ ವಿಲನ್

Public TV
1 Min Read

ಮಿಳಿನ ಖ್ಯಾತ ನಟ ಧನುಷ್ (Dhanush) ನಿರ್ದೇಶಿಸಿ, ನಟಿಸುತ್ತಿರುವ ಸಿನಿಮಾದಲ್ಲಿ ಖ್ಯಾತ ನಟ ಎಸ್.ಜೆ ಸೂರ್ಯ (SJ Surya) ವಿಲನ್ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಮಾಹಿತಿಯನ್ನು ಸ್ವತಃ ಧನುಷ್ ಅವರೇ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಪ್ರತಿಯಾಗಿ ಸೂರ್ಯ ಧನ್ಯವಾದಗಳನ್ನೂ ಅರ್ಪಿಸಿದ್ದಾರೆ.

ಧನುಷ್  ಅವರ ಮಹತ್ವಾಕಾಂಕ್ಷಿ ಈ ಸಿನಿಮಾದ ಟೈಟಲ್ ಫಿಕ್ಸ್ ಆಗಿದೆ. ಈ ಸಿನಿಮಾಗೆ ಧನುಷ್ ಅವರೇ ನಿರ್ದೇಶಿಸಿ, ನಟಿಸುತ್ತಿದ್ದು ಚಿತ್ರಕ್ಕೆ ರಾಯನ್ (Rayan) ಎಂದು ಹೆಸರಿಡಲಾಗಿದೆ. ಜೊತೆಗೆ ಚಿತ್ರದ ಫಸ್ಟ್ ಲುಕ್ ಕೂಡ ರಿಲೀಸ್ ಮಾಡಿದೆ ಚಿತ್ರತಂಡ. ನಾನಾ ಕಾರಣಗಳಿಂದಾಗಿ ಫಸ್ಟ್ ಲುಕ್ ಕುತೂಹಲ ಮೂಡಿಸಿದೆ.

2017ರಲ್ಲಿ ತೆರೆಕಂಡ ‘ಪಾ ಪಂಡಿ’ ಸಿನಿಮಾದ ಮೂಲಕ ನಿರ್ದೇಶಕರಾಗಿಯೂ ಚಿತ್ರರಂಗದಲ್ಲಿ ಗುರುತಿಸಿಕೊಂಡವರು ಧನುಷ್. ಅದಾದ ನಂತರ ಇದೀಗ ತಮ್ಮ ಚಿತ್ರಕ್ಕೆ ತಾವೇ ನಿರ್ದೇಶನ ಮಾಡಿಕೊಂಡಿದ್ದಾರೆ. ಇದು ಧನುಷ್ ಅವರ 50ನೇ ಸಿನಿಮಾ ಎನ್ನುವುದು ಮತ್ತೊಂದು ವಿಶೇಷ.   ಸನ್ ಪಿಕ್ಚರ್ಸ್ ಲಾಂಛನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ತಮಿಳು, ತೆಲುಗು, ಹಿಂದಿ ಭಾಷೆಯಲ್ಲಿ ಮೂಡಿ ಬರಲಿದೆ.

 

ಕಳೆದ ವರ್ಷ ಜುಲೈನಲ್ಲಿ ಈ ಸಿನಿಮಾದ ಶೂಟಿಂಗ್ ಶುರುವಾಗಿತ್ತು. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿಸಿದ್ದಾರಂತೆ ಧನುಷ್. ಶೂಟಿಂಗ್ ಪೂರ್ಣಗೊಳಿಸಿಯೇ ಅವರು ಡಿ.51ರ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಈ ಸಿನಿಮಾದ ಶೂಟಿಂಗ್ ಕೂಡ ಈಗ ನಡೆಯುತ್ತಿದೆ.

Share This Article