ರಾಮನವಮಿ| ಅಯೋಧ್ಯೆ ಬಾಲರಾಮನ ಹಣೆ ಮೇಲೆ ಮೂಡಿದ ʼಸೂರ್ಯ ತಿಲಕʼ

Public TV
1 Min Read

ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ರಾಮನವಮಿ (Ram Navami) ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ ತಿಲಕ ಮೂಡಿದೆ.

ಸೂರ್ಯನ ಕಿರಣವು (Surya Tilak) ನೇರವಾಗಿ ರಾಮಲಲ್ಲಾ ವಿಗ್ರಹದ ಹಣೆಯ ಮೇಲೆ ಬಿದ್ದ ದಿವ್ಯ ದೃಶ್ಯ ಕಂಡುಬಂತು. ನಿಖರವಾಗಿ ಮಧ್ಯಾಹ್ನ 12 ಗಂಟೆಗೆ ರಾಮಲಲ್ಲಾ ವಿಗ್ರಹದ ಹಣೆಯ ಮೇಲೆ ಬಿದ್ದ ಸೂರ್ಯನ ಕಿರಣ, ದಿವ್ಯ ತಿಲಕವನ್ನು ರೂಪಿಸಿತು. ಇದನ್ನೂ ಓದಿ: ಬೆಂಗಳೂರಿನ ಎಲ್ಲೆಡೆ ರಾಮನವಮಿಯ ಸಂಭ್ರಮ – ಬಾಲರಾಮನ ವೇಷ ತೊಟ್ಟು ಬಂದ ಪುಟಾಣಿಗಳು

ಸೂರ್ಯ ಕಿರಣವು ದೇವರ ಹಣೆಯನ್ನು ಬೆಳಗಿಸಿ, ಆಚರಣೆಗಳಿಗೆ ಆಧ್ಯಾತ್ಮಿಕ ಹೊಳಪನ್ನು ನೀಡಿತು.

ದೇಶಾದ್ಯಂತ ರಾಮನವಮಿಯನ್ನು ಅತ್ಯಂತ ವೈಭವದಿಂದ ಆಚರಿಸಲಾಗುತ್ತಿದೆ. ಇದು ವಿಷ್ಣುವಿನ ಏಳನೇ ಅವತಾರವಾದ ಭಗವಾನ್ ರಾಮನ ಜನ್ಮ ವಾರ್ಷಿಕೋತ್ಸವದ ದಿನ. ಜನರು ದೇವಾಲಯಗಳಿಗೆ ತೆರಳಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಅಲ್ಲಲ್ಲಿ ಭಜನೆಗಳು, ಮೆರವಣಿಗೆಗಳು ಮತ್ತು ಜಪಗಳು ನಡೆಯುತ್ತಿವೆ. ದೃಕ್ ಪಂಚಾಂಗದ ಪ್ರಕಾರ, ಭಗವಾನ್ ರಾಮನು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿ ತಿಥಿಯಂದು ಜನಿಸಿದ್ದ.

ರಾಮನವಮಿ ಹಿನ್ನೆಲೆಯಲ್ಲಿ ಅಯೋಧ್ಯೆ ರಾಮಮಂದಿರವು ಹೂವು, ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಲಕ್ಷಾಂತರ ಭಕ್ತರು ರಾಮಮಂದಿರಕ್ಕೆ ತೆರಳಿ ದೇವರ ದರ್ಶನ ಪಡೆಯುತ್ತಿದ್ದಾರೆ. ಇದನ್ನೂ ಓದಿ: ರಾಮನವಮಿ | 50 ಲಕ್ಷ ಭಕ್ತರಿಂದ ಅಯೋಧ್ಯೆ ಶ್ರೀರಾಮನ ದರ್ಶನ ಸಾಧ್ಯತೆ

Share This Article