ಮೈಸೂರಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಶಂಕೆ – ಬಾಳೆ ತೋಟದಲ್ಲಿ ಶವ ಪತ್ತೆ

By
1 Min Read

ಮೈಸೂರು: ಜಿಲ್ಲೆಯ ನಂಜನಗೂಡು (Nanjangud) ತಾಲೂಕಿನ ಗಟ್ಟವಾಡಿ ಗ್ರಾಮದ ಬಾಳೆ ತೋಟವೊಂದರಲ್ಲಿ ಮಹಿಳೆ ಶವ ಪತ್ತೆಯಾಗಿದ್ದು, ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಗಟ್ಟವಾಡಿ ಗ್ರಾಮದ ಶಶಿಕಲಾ (38) ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಮಹಿಳೆ. ಅದೇ ಗ್ರಾಮದ ನಂಜುಂಡಪ್ಪ ಅಲಿಯಾಸ್‌ ಸಿದ್ದಲಿಂಗಪ್ಪ ಎಂಬವರ ಬಾಳೆ ತೋಟದಲ್ಲಿ ಶವ ಪತ್ತೆಯಾಗಿದೆ. ಇದನ್ನೂ ಓದಿ: ಹಿಂದೂ ಯುವತಿಯರನ್ನು ಗುರಿಯಾಗಿಸಿಕೊಂಡು ಕೃತ್ಯ, ಇದೊಂದು ಪೂರ್ವಯೋಜಿತ ಪ್ಲ್ಯಾನ್- ಸುನೀಲ್ ಕುಮಾರ್

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಬಾಳೆ ತೋಟದ ಮಾಲೀಕ ನಂಜುಂಡಪ್ಪ ಗ್ರಾಮದಿಂದ ನಾಪತ್ತೆಯಾಗಿದ್ದಾನೆ. ನಂಜನಗೂಡಿನ ಡಿವೈಎಸ್ಪಿ ರಘು ಪಿಎಸ್ಐ ಲಕ್ಷ್ಮಿಕಾಂತ ಕೋಳಿ, ಚೇತನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಚರಂಡಿ ನೀರಿಗೆ ಬಿದ್ದು 4 ವರ್ಷದ ಬಾಲಕ ಸಾವು

Share This Article