– 10ಕ್ಕೂ ಹೆಚ್ಚು ಮನೆಗಳಿಗೆ ಹಾನಿ
ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು (Cylinder Explosion) ಬಾಲಕ ಸಾವನ್ನಪ್ಪಿದ ಘಟನೆ ನಗರದ (Bengaluru) ಆಡುಗೊಡಿಯಲ್ಲಿ (Adugodi) ನಡೆದಿದೆ. ಘಟನೆಯಲ್ಲಿ 8 ಜನ ಗಾಯಗೊಂಡಿದ್ದಾರೆ. ಅದರಲ್ಲಿ ಮೂವರ ಸ್ಥಿತಿ ಗಂಭಿರವಾಗಿದೆ ಎಂದು ತಿಳಿದುಬಂದಿದೆ.
ಮೃತ ಬಾಲಕನನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ತಿಮ್ಮರಾಜು ಎಂಬುವವರ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಆ ಮನೆ ಸಂಪೂರ್ಣ ಛಿದ್ರವಾಗಿದೆ. ಸ್ಫೋಟದಿಂದ ಅಕ್ಕಪಕ್ಕದ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಗಾಯಾಳುಗಳು ತೀವ್ರ ರಕ್ತಸ್ರಾವ ಹಾಗೂ ಸುಟ್ಟ ಗಾಯಗಳಿಂದ ನರಾಳಾಡುತ್ತಿರುವ ದೃಶ್ಯ ಸಹ ಕಂಡು ಬಂತು. ಗಾಯಾಳಯಗಳನ್ನು ಸಂಜಯ್ ಗಾಂಧಿ, ರಾಜೀವ್ ಗಾಂಧಿ ಆಸ್ಪತ್ರೆ ಸೇರಿದಂತೆ ಇತರೆ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಇದನ್ನೂ ರಜೆ: ರೇಣುಕಾ ಕೊಲೆ ಹಠಾತ್ ಪ್ರಚೋದನೆಯಿಂದಾಗಿಲ್ಲ, ಪೂರ್ವಯೋಜಿತ – ದರ್ಶನ್ ಪಾತ್ರದ ಬಗ್ಗೆ ಸುಪ್ರೀಂ ಅಭಿಪ್ರಾಯ
ಸಿಲಿಂಡರ್ ಲೀಕ್ ಆಗಿ ಕೆಮಿಕಲ್ ರಿಯಾಕ್ಷನ್ ಆಗಿ ಈ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಘಟನಾ ಸ್ಥಳಕ್ಕೆ ಆಡುಗೊಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಡೀ ರಾತ್ರಿ ಗ್ಯಾಸ್ ಲೀಕ್ ಆಗಿ ಕೆಮಿಕಲ್ ರಿಯಾಕ್ಷನ್ ಆಗಿ ಸ್ಫೋಟ ಸಂಭವಿಸಿರಬಹುದು ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಇದನ್ನೂ ರಜೆ: 3ನೇ ಬಾರಿಗೆ ಪರಪ್ಪನ ಅಗ್ರಹಾರ ಸೇರಿದ ದರ್ಶನ್