ನಿಗೂಢ ಸ್ಫೋಟ | ಬಹು ಅಂಗಾಂಗ ಡ್ಯಾಮೇಜ್‌ನಿಂದ ಬಾಲಕ ಸಾವು, ಮತ್ತೊಬ್ಬನಿಗೆ 45% ಸುಟ್ಟ ಗಾಯ – ವೈದ್ಯರ ಪ್ರತಿಕ್ರಿಯೆ

Public TV
1 Min Read

ಬೆಂಗಳೂರು: ನಗರದ (Bengaluru) ಆಡುಗೊಡಿಯಲ್ಲಿ (Adugodi) ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ‌ (Suspected Cylinder Explosion) ಒಂದು ಮಗುವಿನ ಬಹು ಅಂಗಾಂಗಗಳು ಹಾನಿಗೊಳಗಾಗಿ ಸಾವನ್ನಪ್ಪಿದೆ. ಮತ್ತೊಂದು ಮಗುವಿಗೆ 45% ಸುಟ್ಟಗಾಯಗಳಾಗಿವೆ ಎಂದು ಇಂದಿರಾಗಾಂಧಿ ಆಸ್ಪತ್ರೆಯ ನಿರ್ದೇಶಕ ಡಾ. ಸಂಜಯ್ ಹೇಳಿದ್ದಾರೆ.

ಇಂದು (ಆ.15) ಬೆಳಗ್ಗೆ 8:30ರ ಸುಮಾರಿಗೆ ಒಂದೇ ಕುಟುಂಬದ ಇಬ್ಬರು ಬಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬ್ಲಾಸ್ಟ್ ತೀವ್ರತೆಗೆ ಇಬ್ಬರು ಮಕ್ಕಳ ಮೇಲೆ ಗೋಡೆ ಬಿದ್ದಿದೆ. ಅದರಲ್ಲಿ ಮುಬಾರಕ್‌ ಎಂಬ ಬಾಲಕ ಸಾವನ್ನಪ್ಪಿದ್ದಾನೆ. 45% ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಬಾಲಕನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನನೂ ಮೃತ ಮಗುವಿನ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರು | ನಿಗೂಢ ಸ್ಫೋಟ – ಬಾಲಕ ಸಾವು, 8 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ

ಘಟನೆಯಲ್ಲಿ 8 ಜನ ಗಾಯಗೊಂಡಿದ್ದಾರೆ. ಅದರಲ್ಲಿ ಮೂವರ ಸ್ಥಿತಿ ಗಂಭಿರವಾಗಿದೆ ಎಂದು ತಿಳಿದುಬಂದಿದೆ. ಸ್ಫೋಟದಿಂದ ಅಕ್ಕಪಕ್ಕದ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಸಿಲಿಂಡರ್ ಲೀಕ್ ಆಗಿ ಕೆಮಿಕಲ್ ರಿಯಾಕ್ಷನ್ ಆಗಿ ಈ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಘಟನಾ ಸ್ಥಳಕ್ಕೆ ಆಡುಗೊಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಬಳಿಕ, ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ. ಘೋಷಿಸಿದ್ದರು. ಗಂಭೀರವಾಗಿ ಗಾಯಗೊಂಡ ಕಸ್ತೂರಮ್ಮ ಚಿಕಿತ್ಸೆಯನ್ನು ಸರ್ಕಾರ ಭರಿಸುತ್ತದೆ. ಹಾನಿಗೊಳಗಾದ ಮನೆಗಳ ರಿಪೇರಿಗೆ ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದ್ದರು. ಇದನ್ನೂ ಓದಿ: ನಿಗೂಢ ಸ್ಫೋಟ | ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Share This Article