ಬೆಂಗಳೂರಲ್ಲಿ ಶಂಕಿತ ಉಗ್ರ ಜುನೈದ್ ಸಹಚರನ ಬಂಧನ

Public TV
1 Min Read

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಂಕಿತ ಉಗ್ರ (Suspected Terrorists) ಜುನೈದ್ ಸಹಚರನನ್ನು ಆರ್.ಟಿ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಮೊಹಮ್ಮದ್ ಅರ್ಷದ್ ಖಾನ್ (Mohammad Arshad Khan) ಎಂದು ಗುರುತಿಸಲಾಗಿದೆ. ಈತನ ಮೇಲೆ 17 ಕೇಸ್‍ಗಳಿದ್ದು, ಕಳೆದ 4 ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದನು.

ಸದ್ಯ ಮೊಹಮ್ಮದ್ ಅರ್ಷದ್ ಖಾನ್ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಐವರು ಶಂಕಿತರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಜುನೈದ್‍ಗೆ ಮೊಹಮ್ಮದ್ ಅರ್ಷದ್ ಅಪ್ತನಾಗಿದ್ದ. ಜುನೈದ್ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಕೂಡ ಈತ ಹೊಂದಿದ್ದಾನೆ. ಇದನ್ನೂ ಓದಿ: ಇಸ್ರೋ ವಿಜ್ಞಾನಿಯ ಕಾರಿಗೆ ಕಲ್ಲೆಸೆತ – ಹಿಂಭಾಗದ ಗಾಜು ಪುಡಿ ಪುಡಿ

ಸೋಮವಾರ ರಾತ್ರಿ ಬಂಧನಕ್ಕೆ ಹೋದ ವೇಳೆ ಆರೋಪಿ ಆತ್ಮಹತ್ಯೆ ಬೆದರಿಕೆ ಹಾಕಿದ್ದ. ಸದ್ಯ ಬಂಧಿತನಾಗಿರುವ ಅರ್ಷದ್, ಶಂಕಿತ ಜುನೈದ್ ಸಂಪರ್ಕದಲ್ಲೇನಾದ್ರು ಇದ್ದಾನಾ..?, ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನಾ ಎಂಬೆಲ್ಲ ಕುರಿತು ತನಿಖೆ ನಡೆಸಲಾಗುತ್ತಿದೆ.

Web Stories

Share This Article
ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ