ಪತ್ನಿಗೆ ಅಕ್ರಮ ಸಂಬಂಧ – ಎರಡು ಮಕ್ಕಳಿಗೆ ವಿಷವುಣಿಸಿ ಪತಿ ಆತ್ಮಹತ್ಯೆ

Public TV
2 Min Read

ಗಾಂಧಿನಗರ: ಪತ್ನಿ ಇನ್ನೊಬ್ಬನೊಂದಿಗೆ ಅಕ್ರಮ ಸಂಬಂಧ (Affair) ಹೊಂದಿದ್ದ ಹಿನ್ನೆಲೆ ಗಂಡ ತನ್ನ ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೂರತ್‌ನಲ್ಲಿ (Surat) ನಡೆದಿದೆ.

ಘಟನೆ ಸಂಬಂಧ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ. ಸೂರತ್ ನಗರದ ದಿಂಡೋಲಿಯ (Dindoli) ಶಾಲೆಯೊಂದರಲ್ಲಿ ಶಿಕ್ಷಕನಾಗಿದ್ದ ಅಲ್ಪೇಶ್‌ಭಾಯ್ (41) ತನ್ನ 7 ವರ್ಷ ಹಾಗೂ 2 ವರ್ಷದ ಮಕ್ಕಳಿಗೆ ವಿಷ ನೀಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ವರ್ತೂರ್‌ ಪ್ರಕಾಶ್‌ ಕಿಡ್ನ್ಯಾಪ್‌ ಕೇಸಲ್ಲಿ ಆರೋಪಿಯಾಗಿದ್ದ ಭೂಗತ ಪಾತಕಿ ರವಿ ಪೂಜಾರಿ ಸಹಚರ ಬಂಧನ

ಪತ್ನಿ ಫಲ್ಗುಣಿ ಭಾಯಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಗುಮಾಸ್ತಳಾಗಿದ್ದಳು. ಫಲ್ಗುಣಿ ಪತಿಗೆ ಫೋನ್ ಮಾಡಿದ ವೇಳೆ ಅಲ್ಪೇಶ್ ಉತ್ತರಿಸಿರಲಿಲ್ಲ. ಈ ಹಿನ್ನೆಲೆ ಮನೆಗೆ ಬಂದು ನೋಡಿದಾಗ ಬಾಗಿಲುಗಳು ಲಾಕ್ ಆಗಿತ್ತು. ನಂತರ ಪತ್ನಿ ಸಂಬಂಧಿಕರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾಳೆ. ಮನೆಗೆ ಬಂದ ಸಂಬಂಧಿಕರು ಮನೆಯ ಬಾಗಿಲು ಒಡೆದು ಒಳಗೆ ಹೋದಾಗ ಹಾಸಿಗೆಯ ಮೇಲೆ ಇಬ್ಬರು ಮಕ್ಕಳು ಹಾಗೂ ಪಕ್ಕದಲ್ಲೇ ಪತಿ ಕೂಡ ಶವವಾಗಿ ಬಿದ್ದಿದ್ದರು ಎಂದು ಎಂದು ಸೂರತ್‌ನ ಉಪ ಪೊಲೀಸ್ ಆಯುಕ್ತ (ಡಿಸಿಪಿ) ವಿಜಯ್ ಸಿಂಗ್ ಗುರ್ಜರ್ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಕೇಸಲ್ಲಿ ತೀರ್ಪು ವಿಳಂಬಕ್ಕೆ ಶತಪ್ರಯತ್ನ ನಡೆದಿತ್ತು: ಎಸ್‌ಐಟಿ ಮುಖ್ಯಸ್ಥ ಬಿಕೆ ಸಿಂಗ್

ಮೃತ ಅಲ್ಪೇಶ್ ಮೊಬೈಲ್‌ನಲ್ಲಿ ಡೆತ್ ನೋಟ್ ಹಾಗೂ ಕೆಲವು ವೀಡಿಯೋಗಳು ಲಭಿಸಿವೆ. ಅಲ್ಲದೇ ರೂಮ್‌ನಲ್ಲಿ ಎರಡು ಡೈರಿಗಳು ಕೂಡ ಸಿಕ್ಕಿದೆ. ಘಟನೆ ಸಂಬಂಧ ಅಲ್ಪೇಶ್ ಸಹೋದರ ಪೊಲೀಸರಿಗೆ ದೂರು ನೀಡಿದ್ದು, ಅಲ್ಪೇಶ್ ಪತ್ನಿ ಫಲ್ಗುಣಿ ಭಾಯಿ, ನರೇಶ್ ಕುಮಾರ್ ರಾಥೋಡ್ ಎಂಬ ಇನ್ನೊಬ್ಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂಬಂಧದಿಂದಾಗಿ ಅಲ್ಪೇಶ್ ತೀವ್ರ ಒತ್ತಡದಲ್ಲಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರಿಗೆ ಹೇಳಿದ್ದಾರೆ. ಇದನ್ನೂ ಓದಿ: ದೊಡ್ಡಗಾಜನೂರಿನಲ್ಲಿ ಈಡಿಗ ಸಂಪ್ರದಾಯದಂತೆ ನೆರವೇರಿದ ಡಾ.ರಾಜ್ ಸಹೋದರಿ ಅಂತ್ಯಕ್ರಿಯೆ

ಡೈರಿಯಲ್ಲಿ ಅಕ್ರಮ ಸಂಬಂಧದಿಂದ ಮನನೊಂದಿರುವುದಾಗಿ ತಿಳಿದುಬಂದಿದೆ. ಹೆಚ್ಚಿನ ತನಿಖೆಗಾಗಿ ಡೈರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ವಿಕಸಿತ ಭಾರತ್ @ 2047: ಹೂಡಿಕೆದಾರರ ದುಂಡುಮೇಜಿನ ಸಮ್ಮೇಳನ

Share This Article