ಬೆಳಿಗ್ಗೆ ಮದುವೆ, ರಾತ್ರಿ ನೇಣು ಬಿಗಿದು ಆತ್ಮಹತ್ಯೆ – ಡೇಟಾ ಆಪರೇಟರ್ ಸಾವಿನ ಸುತ್ತ ಅನುಮಾನದ ಹುತ್ತ

Public TV
1 Min Read

ಕೋಲಾರ: ಬೆಳಿಗ್ಗೆ ಮದುವೆಯಾಗಿದ್ದ ವ್ಯಕ್ತಿ ಅದೇ ದಿನ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

ಬಂಗಾರಪೇಟೆ (Bangarpete) ತಾಲೂಕಿನ ನಾಯಕರಹಳ್ಳಿ ಮೂಲದ ಹರೀಶ್ ಬಾಬು (33) ನೇಣಿಗೆ ಶರಣಾಗಿದ್ದು, ಕಳೆದ 8 ವರ್ಷಗಳಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು.ಇದನ್ನೂ ಓದಿ: ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ ಆಗಲಿ: ಸಂಸದ ಯದುವೀರ್

ಕಳೆದ ಮೂರು ದಿನಗಳಿಂದ ರಜೆಯಲ್ಲಿದ್ದ ಹರೀಶ್ ಬಾಬು, ಬುಧವಾರ ಬೆಳಿಗ್ಗೆ ರಿಜಿಸ್ಟಾರ್ ಮ್ಯಾರೇಜ್ ಆಗಿದ್ದರು. ಆದರೆ ಅದೇ ದಿನ ರಾತ್ರಿ 11:30ರ ಸುಮಾರಿಗೆ ಆಸ್ಪತ್ರೆಯ ಇಎನ್‌ಟಿ ವಿಭಾಗದ ಕೊಠಡಿಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.

ಈ ಕುರಿತು ಮೃತ ಹರೀಶ್ ಬಾಬು ತಾಯಿ ಮಾತನಾಡಿ, ಒಂದು ತಿಂಗಳ ಹಿಂದೆ ಯುವತಿಯೊಬ್ಬಳು ನಮ್ಮ ಮನೆಗೆ ಬಂದು ನಾನು ಹಾಗೂ ಹರೀಶ್ ಮದುವೆಯಾಗುತ್ತೇವೆ ಎಂದಳು. ಅದಕ್ಕೆ ಕೆಲ ದಿನಗಳ ನಂತರ ನಾನೇ ಮಾಡುತ್ತೇನೆ ಎಂದು ಹೇಳಿದ್ದೆ. ಆದರೆ ಬುಧವಾರ ಬೆಳಿಗ್ಗೆ ಯುವತಿ ಕಡೆಯವರು ಬಂದು ನನ್ನ ಮಗನನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ಮದುವೆ ಮಾಡಿಸಿದ್ದಾರೆ ಎಂದು ತಿಳಿಸಿದರು.

ಮೃತ ಹರೀಶ್ ಬುಧವಾರ ರಾತ್ರಿ 11:15ರ ಸುಮಾರಿಗೆ ಆಸ್ಪತ್ರೆಯೊಳಗೆ ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮದ್ಯ ಸೇವನೆ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸದ್ಯ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಲ್ಯಾಂಬೋರ್ಗಿನಿ ಭೀಕರ ಅಪಘಾತ; ಫುಟ್ಬಾಲ್‌ ಆಟಗಾರ ಡಿಯೋಗೊ ದುರಂತ ಸಾವು

Share This Article