ಪ್ರತಿಷ್ಠಿತ ಕಂಪನಿಯೊಂದರ ಮಹಿಳಾ ಉದ್ಯೋಗಿ ಅನುಮಾನಾಸ್ಪದ ಸಾವು – ಪ್ರಿಯಕರ ಬಂಧನ

Public TV
1 Min Read

ಕೋಲಾರ: ಇಲ್ಲಿನ ಪ್ರತಿಷ್ಠಿತ ಕಂಪೆನಿಯೊಂದರ ಮಹಿಳಾ ಉದ್ಯೋಗಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.

ನೆರ್ನಹಳ್ಳಿ ಗ್ರಾಮದ ನವ್ಯಶ್ರೀ ಕಳೆದ ಒಂದೂವರೆ ವರ್ಷದ ಹಿಂದೆ ಕೋಲಾರ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಕೆಲಸಕ್ಕೆ ಸೇರಿದ್ದಳು. ಊರಿನಿಂದ ಹೋಗಿ ಬರೋದು ಕಷ್ಟ ಎಂದು ಕೋಲಾರ ನಗರದ ಕಾರಂಜಿಕಟ್ಟೆ ಬಡಾವಣೆಯಲ್ಲಿ ಪ್ರತ್ಯೇಕವಾಗಿ ರೂಮ್ ಮಾಡಿಕೊಂಡು ಕೆಲಸಕ್ಕೆ ಹೋಗುತ್ತಿದ್ದಳು. ಆದರೆ ಇದ್ದಕ್ಕಿಂದಂತೆ ನವ್ಯಶ್ರೀ ಡಿ.26 ರಂದು ಕಾರಂಜಿಕಟ್ಟೆಯ ರೂಮ್‍ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಇದನ್ನೂ ಓದಿ: ಮಾಜಿ ಪೊಲೀಸ್ ಅಧಿಕಾರಿ 10 ವರ್ಷ ಜೈಲು ಶಿಕ್ಷೆ ವಿಧಿಸಿದ ಸಿಬಿಐ

ಕುಟುಂಬಸ್ಥರು ನವ್ಯಶ್ರೀ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಇದೊಂದು ಕೊಲೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕೊಲೆಯ ಹಿಂದೆ ಅದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬನ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

ನವ್ಯಶ್ರೀ ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಕಡಿಸೀಗೇನಹಳ್ಳಿ ಗ್ರಾಮದ ಪ್ರದೀಪ್ ಯಾದವ್ ಕೆಲಸಮಾಡುತ್ತಿದ್ದ. ಇವರಿಬ್ಬರು ಪ್ರೀತಿಸುತ್ತಿದ್ದರು. ಆಗಾಗ ಪ್ರದೀಪ್, ನವ್ಯಶ್ರೀ ಇದ್ದ ರೂಮಿಗೆ ಬಂದು ಹೋಗುತ್ತಿದ್ದ ಎಂದು ಮನೆಯ ಮಾಲೀಕರು ಹಾಗೂ ಅಕ್ಕಪಕ್ಕದವರು ಮಾಹಿತಿ ನೀಡಿದ್ದಾರೆ.

POLICE JEEP

ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿದ್ದು, ಒಂದಷ್ಟು ಮಾಹಿತಿ ಸಂಗ್ರಹಿಸಿದ್ದಾರೆ. ಇಬ್ಬರ ಫೋನ್ ಕಾಲ್ ಹಾಗೂ ವಾಟ್ಸಪ್ ಚಾಟಿಂಗ್ ನೋಡಿದಾಗ ಕೊಲೆಯ ಹಿಂದೆ ಪ್ರದೀಪ್ ಕೈವಾಡವಿರುವುದು ಸ್ಪಷ್ಟವಾಗಿದ್ದು, ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಕಳ್ಳಮಾರ್ಗದ ಮೂಲಕ ರಾಜ್ಯಪ್ರವೇಶಕ್ಕೆ ಯತ್ನ – ಖಾಸಗಿ ಬಸ್‍ಗಳ ವಿರುದ್ಧ ಪ್ರಕರಣ ದಾಖಲು

ಕೋಲಾರ ನಗರ ಠಾಣಾ ಪೊಲೀಸರು ಆರೋಪಿ ಪ್ರದೀಪ್ ಯಾದವ್‍ನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *