ಸ್ವರೂಪ್ ನನ್ನ ಮಗನಿದ್ದಂತೆ, ನಾನು ಪರಿಪೂರ್ಣವಾಗಿ ಆಶೀರ್ವಾದ ಮಾಡಿದ್ದೇನೆ – ಭವಾನಿ ರೇವಣ್ಣ

Public TV
1 Min Read

– ಹಾಸನದಲ್ಲಿ ಅಬ್ಬರದ ಭಾಷಣ; ರೇವಣ್ಣ ಕುಟುಂಬ ಒಗ್ಗಟ್ಟು ಪ್ರದರ್ಶನ

ಹಾಸನ: ಸ್ವರೂಪ್ (Swaroop) ನನ್ನ ಮಗನಿದ್ದಂತೆ, ನಾನು ಸ್ವರೂಪ್‌ನನ್ನ ಮಗನಾಗಿಯೇ ನೋಡಿದ್ದೇನೆ. ನಾನು ಪರಿಪೂರ್ಣವಾಗಿ ಆಶೀರ್ವಾದ ಮಾಡಿದ್ದೇನೆ, ಈ ಕ್ಷೇತ್ರದಲ್ಲಿ ಸ್ವರೂಪ್‌ ಗೆದ್ದೇ ಗೆಲ್ತಾನೆ ಎಂದು ಭವಾನಿ ರೇವಣ್ಣ (Bhavani Revanna) ಭವಿಷ್ಯ ನುಡಿದಿದ್ದಾರೆ.

ಹಾಸನ ನಗರದ ಜ್ಞಾನಾಕ್ಷಿ ಕಲ್ಯಾಣ ಮಂಟಪದಲ್ಲಿ ನಡೆದ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಒಂದೇ ವೇದಿಕೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಕುಟುಂಬ ಭಾಗಿಯಾಗಿ, ಸ್ವರೂಪ್ ಗೆಲ್ಲಿಸುವಂತೆ ಮನವಿ ಮಾಡಿದರು. ಈ ವೇಳೆ ಸ್ವರೂಪ್ ಅವರು, ರೇವಣ್ಣ ಹಾಗೂ ಭವಾನಿ ರೇವಣ್ಣ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ, ಭವಾನಿ ರೇವಣ್ಣ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು. ಇದನ್ನೂ ಓದಿ: ದೇಶಕ್ಕೆ ದೇವೇಗೌಡರು, ರಾಜ್ಯಕ್ಕೆ ಕುಮಾರಣ್ಣ, ಹಾಸನಕ್ಕೆ ರೇವಣ್ಣ : ಎ.ಮಂಜು – ಭವಾನಿ ಜುಗಲ್ ಬಂದಿ

ಸಭೆಯಲ್ಲಿ ಮಾತನಾಡಿದ ಭವಾನಿ ಅವರು, ಯಾರಿಗೆ ಟಿಕೆಟ್ ನೀಡಬೇಕು ಅನ್ನುವ ಚರ್ಚೆ ನಡೆಯುತ್ತಿದ್ದಾಗ ಕುಮಾರಣ್ಣ ಸ್ವರೂಪ್‌ಗೆ ಟಿಕೆಟ್‌ ಕೊಟ್ಟಿದ್ದಾರೆ. ನಾವೂ ಮೂರು ಬಾರಿ ಫೋನ್ ಮಾಡಿ ಸ್ವರೂಪ್‌ಗೇ ಟಿಕೆಟ್ ಕೊಡಿ ಅಂತಾ ಕುಮಾರಣ್ಣಗೆ ಹೇಳಿದ್ವಿ ಎಂದು ಹೇಳಿದರು.

ನನಗೆ ದೇವೇಗೌಡರ ಆರೋಗ್ಯ ಮುಖ್ಯವಾಗಿತ್ತು. ದೇವೇಗೌಡರಿಗಿಂತ ನಾನೇ ದೊಡ್ಡವಳಾ ಅಂತಾ ಅನ್ನಿಸಿಬಿಡ್ತು. ಹಾಗಾಗಿ ನಾನೇ ತೀರ್ಮಾನಿಸಿ ಸ್ವರೂಪ್ ಹೆಸರು ಅನೌನ್ಸ್ ಮಾಡಿಸಿದೆ. ಶುಕ್ರವಾರ ಒಳ್ಳೆಯ ದಿನ ಅನೌನ್ಸ್ ಮಾಡಿ ಅಂತಾ ಕುಮಾರಣ್ಣಗೆ ಹೇಳಿದೆ. ನನಗೆ ಟಿಕೆಟ್ ಸಿಕ್ಕಿಲ್ಲ ಅಂತಾ ಹಾಸನ ಕಡೆಗಣಿಸಲ್ಲ. ಒಟ್ಟಿನಲ್ಲಿ ಬಿಜೆಪಿ ಸೋಲಿಸಬೇಕು ಅಷ್ಟೇ ಎಂದು ಕರೆ ನೀಡಿದರು. ಇದನ್ನೂ ಓದಿ: ರೇವಣ್ಣ ಕುಟುಂಬದವ್ರು ನನ್ನ ಪರ ಪ್ರಚಾರಕ್ಕೆ ಬರುತ್ತಾರೆ: ಹಾಸನ ಜೆಡಿಎಸ್ ಅಭ್ಯರ್ಥಿ

ಹಾಸನದಲ್ಲಿ ಬಿಜೆಪಿಯನ್ನ ಸಂಪೂರ್ಣವಾಗಿ ತೆಗೆದುಹಾಕಬೇಕು. ಅದಕ್ಕಾಗಿ ನಿದ್ರೆ ಬಿಟ್ಟು ಕೆಲಸ ಮಾಡಿ, ಸ್ವರೂಪ್ ಗೆಲ್ಲಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದ ಅವರು, ನಾನು ಪರಿಪೂರ್ಣವಾಗಿ ಆಶೀರ್ವಾದ ಮಾಡುತ್ತಿದ್ದೇನೆ, ಈ ಕ್ಷೇತ್ರದಲ್ಲಿ ಗೆದ್ದೇ ಗೆಲ್ತಾನೆ ಎಂದು ನುಡಿದರು.

Share This Article