ರಸ್ತೆ, ಚರಂಡಿಯಂತಹ ಸಣ್ಣ ವಿಚಾರಗಳನ್ನು ಕೇಳ್ಬೇಡಿ, ಲವ್ ಜಿಹಾದ್‍ ಬಗ್ಗೆ ಮಾತನಾಡಿ: ಕಟೀಲ್‌

Public TV
2 Min Read

ಮಂಗಳೂರು: ಕರ್ನಾಟಕ ವಿಧಾನಸಭೆಯ ಚುನಾವಣೆಗೆ(Karnataka Election) ಹತ್ತಿರ ಇರುವುಗಾ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್(Nalin Kumar Kateel) ಆಡಿರುವ ಮಾತುಗಳು ಈಗ ವಿವಾದಕ್ಕೆ ಕಾರಣವಾಗಿದೆ. ಮಂಗಳೂರಿನಲ್ಲಿ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಅಭಿವೃದ್ಧಿ ವಿಚಾರವನ್ನು ಪಕ್ಕಕ್ಕಿಟ್ಟು ಧರ್ಮ ದಂಗಲ್ ಪ್ರಸ್ತಾಪ ಮಾಡಿದ್ದಾರೆ.

ನಾನು ನಿಮಗೆ ಕೇಳಬಯಸುತ್ತೇನೆ. ರಸ್ತೆ, ಚರಂಡಿಯಂತಹ ಸಣ್ಣ ಸಣ್ಣ ವಿಚಾರಗಳ ಬಗ್ಗೆ ಶಾಸಕರಲ್ಲಿ ಏನನ್ನು ಕೇಳ್ಬೇಡಿ. ವೇದವ್ಯಾಸ ಕಾಮತ್ ಸದನದಲ್ಲಿ ಮಾತನಾಡಲಿಲ್ಲ. ಕಟೀಲ್ ಸಂಸತ್‍ನಲ್ಲಿ ಮಾತನಾಡಲಿಲ್ಲ ಅಂತಾ ನೋಡ್ಬೇಡಿ. ನೀವು ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಮಾಡಿ. ನಾವು ಜಿಹಾದ್ ತಡೆಯದಿದ್ರೆ ನಿಮಗೆ ಕಷ್ಟ ಆಗುತ್ತದೆ. ಲವ್ ಜಿಹಾದ್‍ಗೆ(Love Jihad) ಬ್ರೇಕ್ ಹಾಕಲು ಬಿಜೆಪಿ ಬೇಕು. ಅಮಿತ್ ಶಾ ಬೇಕು, ಮೋದಿ ಬೇಕು. ಕರ್ನಾಟಕದಲ್ಲಿ ಬೊಮ್ಮಾಯಿ ಬೇಕು. ನಿಮ್ಮನ್ನು ರಕ್ಷಿಸಲು ಬಿಜೆಪಿಯಿಂದ ಮಾತ್ರ ಸಾಧ್ಯ. ನಮ್ಮನ್ನು ಮತ್ತೆ ಗೆಲ್ಲಿಸಲು ಕೆಲಸ ಮಾಡಿ ಎಂದು ನಳಿನ್ ಕುಮಾರ್ ಕಟೀಲ್ ಕರೆ ನೀಡಿದ್ದಾರೆ.

ಡಿಕೆ ಶಿವಕುಮಾರ್(DK Shivakumar) ಮುಖ್ಯಮಂತ್ರಿಯಾದರೆ ಎಲ್ಲಾ ಭಯೋತ್ಪಾದಕರು ರಸ್ತೆಗೆ ಬರುತ್ತಾರೆ. ನಿಮಗೆ ಅದು ಬೇಕಾ ಎಂದು ಪ್ರಶ್ನಿಸಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರ ಮಾತುಗಳಿಗೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ದೈವಗಳ ವಿಚಾರ ಮಾತನಾಡಿ ಮತ್ತೆ ಪರ ವಿರೋಧದ ಚರ್ಚೆ ಹುಟ್ಟು ಹಾಕಿದ ನಟ ಕಿಶೋರ್

ಕಾಂಗ್ರೆಸ್‌ ಟೀಕೆ
ಬಿಜೆಪಿ ತನ್ನ ವೈಫಲ್ಯಗಳನ್ನು, ಭ್ರಷ್ಟಾಚಾರವನ್ನು ಮರೆಮಾಚಲು ಬಳಸುವುದು ಕೋಮು ಕಲಹವನ್ನು. ರಾಜ್ಯದ ಅಭಿವೃದ್ಧಿ, ಉದ್ಯೋಗ, ಶಿಕ್ಷಣದ ವಿಷಯಗಳು ಬಿಜೆಪಿಗೆ ಸಣ್ಣ ವಿಷಯಗಳು. ಹೇಳಿಕೊಳ್ಳಲು ಅಭಿವೃದ್ಧಿಪರ ಸಾಧನೆಗಳಿಲ್ಲದ ಬಿಜೆಪಿ ಅವುಗಳ ಬಗ್ಗೆ ಮಾತೇ ಆಡಬೇಡಿ ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟಿರುವುದು ಅತ್ಯಂತ ನಾಚಿಕೆಗೇಡಿನ ವಿಷಯ.

ಬಿಜೆಪಿ ಅಧ್ಯಕ್ಷ ಕಟೀಲ್‌ ಅವರೇ, ಲವ್ ಜಿಹಾದ್ ಬಗ್ಗೆ ಆಮೇಲೆ ಮಾತಾಡುವಿರಂತೆ. ಬಿಟ್ ಕಾಯಿನ್ ಹಗರಣ, ಪಿಎಸ್‌ಐ ಅಕ್ರಮ, ಕೆಪಿಟಿಸಿಎಲ್ ಅಕ್ರಮ, ಸಾಲು ಸಾಲು ನೇಮಕಾತಿ ಅಕ್ರಮಗಳು, ಗುತ್ತಿಗೆದಾರರ ಆತ್ಮಹತ್ಯೆ, ರಸ್ತೆ ಗುಂಡಿಯ ಸಾವುಗಳು, ಹೆಚ್ಚಿದ ದಲಿತರ ಮೇಲಿನ ದೌರ್ಜನ್ಯ, ಮೊದಲು ಈ ವಿಷಯಗಳನ್ನು ಮಾತಾಡಿ ದಮ್ಮು, ತಾಕತ್ತು ತೋರಿಸಿ ಎಂದು ಕಾಂಗ್ರೆಸ್‌ ಸವಾಲು ಎಸೆದಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *