ದೇವರಹಿಪ್ಪರಗಿ ಬಿಜೆಪಿ ಶಾಸಕನ ಜೊತೆಗೆ ವಾಗ್ವಾದ – ನಮಗೆ ಸ್ಪಂದಿಸ್ತಿಲ್ಲ ಎಂದು ಕಾರ್ಯಕರ್ತರ ಆಕ್ರೋಶ

Public TV
1 Min Read

ವಿಜಯಪುರ: ದೇವರಹಿಪ್ಪರಗಿ ಮತಕ್ಷೇತ್ರದ ಬಿಜೆಪಿಯಲ್ಲಿ ಆಂತರಿಕ ಕಲಹ ಸ್ಫೋಟವಾಗಿದೆ.

ದೇವರಹಿಪ್ಪರಗಿ ಕ್ಷೇತ್ರದ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ ಹಾಗೂ ಬಿಜೆಪಿ ಮಂಡಳ ಉಪಾಧ್ಯಕ್ಷ ಹಾಗೂ ಶಾಸಕರ ಬೆಂಬಲಿಗರ ನಡುವೆ ನಡುರಸ್ತೆಯಲ್ಲೆ ವಾಗ್ವಾದ ನಡೆದಿದೆ. ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ಇದನ್ನೂ ಓದಿ: ಮಂಗಳೂರು ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ – ಸದಸ್ಯರನ್ನೇ ಹೊರಹಾಕಿದ ನಾಯಕರು

ವಾಗ್ವಾದದ ನಂತರ ಕೈ ಕೈ ಮೀಲಾಯಿಸೋ ಹಂತಕ್ಕೂ ಹೋಗಿದೆ. ಶಾಸಕ ಸೋಮನಗೌಡ ಸ್ಥಳೀಯ ಬಿಜೆಪಿ ಕಾರ್ಯಕರ್ತರನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ. ನಮ್ಮ ಕರೆಗಳನ್ನು ಸ್ವೀಕರಿಸಲ್ಲ ಎಂದು ಮುತ್ತುರಾಜ ಆರೋಪ ಮಾಡಿದ್ದಾನೆ. ಬಿಜೆಪಿ ಮಂಡಲ ಉಪಾಧ್ಯಕ್ಷ ಮುತ್ತುರಾಜ ಹಾಲಿಹಾಳನ ಈ ಮಾತಿಗೆ ಶಾಸಕರ ಬೆಂಬಲಿಗರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆಗ ಪರಸ್ಪರ ಮಾತಿನ ಚಕಮಕಿ, ವಾಗ್ವಾದ ನಡೆದಿದೆ.

ಕೆಲಕಾಲ ಸಹನೆ ಕಳೆದುಕೊಂಡ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ ಕೂಡ ವಾಗ್ವಾದಕ್ಕೆ ಇಳಿದಿದ್ದಾರೆ. ನಂತರ ಪರಿಸ್ಥಿತಿಯನ್ನು ಸ್ಥಳದಲ್ಲಿದ್ದ ಮುಖಂಡರು ತಿಳಿಗೊಳಿಸಿದ್ದಾರೆ. ಇದನ್ನೂ ಓದಿ: ಮುದ್ದಿನ ಮಗಳು ಸಮನ್ವಿಯ ಲಾಸ್ಟ್ ಕಿಸ್ ಹಂಚಿಕೊಂಡ ನಟಿ ಅಮೃತಾ

Share This Article
Leave a Comment

Leave a Reply

Your email address will not be published. Required fields are marked *