‘ಜೈಲರ್’ ಹಾಡಿನಲ್ಲಿ ಮೈಚಳಿ ಬಿಟ್ಟು ಕುಣಿದ ತಮನ್ನಾ

By
1 Min Read

ಬೋಲ್ಡ್ ಪಾತ್ರಗಳ ಮೂಲಕ ಸಾಕಷ್ಟು ಸುದ್ದಿಯಲ್ಲಿರುವ ನಟಿ ತಮನ್ನಾ ಜೈಲರ್ (Jailer) ಸಿನಿಮಾದಲ್ಲೂ ಅದನ್ನು ಮುಂದುವರೆಸಿದ್ದಾರೆ. ನಿನ್ನೆಯಷ್ಟೇ ಜೈಲರ್ ಸಿನಿಮಾದ ಹಾಡೊಂದನ್ನು ರಿಲೀಸ್ ಆಗಿದ್ದು, ಈ ಹಾಡಿನಲ್ಲಿ ನಟಿ ಮೈಚಳಿ ಬಿಟ್ಟು ಕುಣಿದಿದ್ದಾರೆ. ತಮನ್ನಾ (Tamannaah) ಮೈಮಾಟಕ್ಕೆ ಅಭಿಮಾನಿಗಳು ಸುಸ್ತಾಗಿದ್ದಾರೆ.

ರಜನಿಕಾಂತ್ (Rajinikanth) ಮತ್ತು ಶಿವರಾಜ್ ಕುಮಾರ್ ಕಾಂಬಿನೇಷನ್ ನ ಸಿನಿಮಾ ಇದಾಗಿದ್ದು,  ಶೂಟಿಂಗ್ ಕಂಪ್ಲೀಟ್ ಆಗಿದೆ. ಮೊನ್ನೆಯಷ್ಟೇ ಈ ಸಿನಿಮಾದ ಡಬ್ಬಿಂಗ್ ಕಾರ್ಯದಲ್ಲೂ ಶಿವರಾಜ್ ಕುಮಾರ್ ಭಾಗಿಯಾಗಿದ್ದರು. ಸಿನಿಮಾದ ಪ್ರಚಾರಕ್ಕೂ ಮುನ್ನ, ಸಿನಿಮಾದ ಮೊದಲ ಹಾಡನ್ನು (Song) ಚಿತ್ರತಂಡ ರಿಲೀಸ್ ಮಾಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ಹಾಡನ್ನು ಅಭಿಮಾನಿಗಳು ಸವಿದಿದ್ದಾರೆ.

ಜೈಲರ್ ಸಿನಿಮಾದ ಹಾಡು ಯಾವಾಗ ಎಂದು ರಜನಿಕಾಂತ್ ಅಭಿಮಾನಿಗಳು ಕೇಳುತ್ತಿದ್ದರು. ಬೇಗ ಹಾಡು ರಿಲೀಸ್ ಮಾಡಿ ಎನ್ನುವುದು ಅವರ ಆಗ್ರಹ ಕೂಡ ಆಗಿತ್ತು. ಕೊನೆಗೂ ಚಿತ್ರತಂಡ ಅಭಿಮಾನಿಗಳ ಧ್ವನಿಗೆ ಸ್ಪಂದಿಸಿದೆ. ಮೊದಲ ಹಾಡನ್ನು ರಿಲೀಸ್ ಮಾಡುವ ಮೂಲಕ ಅಭಿಮಾನಿಗಳನ್ನು ಕುಣಿಸಿದೆ. ಇದನ್ನೂ ಓದಿ:‘ಟೋಬಿ’ ಶೆಟ್ಟರ ಕೆನ್ನೆಗೆ ಮುತ್ತಿಟ್ಟ ಚೈತ್ರಾ- ರಾಜ್ ಬಿ ಶೆಟ್ಟಿ ಸ್ಪಷನೆ

ಶಿವರಾಜ್ ಕುಮಾರ್ (Shivaraj Kumar) ಮತ್ತು ರಜನಿ ಕಾಂಬಿನೇಷನ್ ನ ಮೊದಲ ಸಿನಿಮಾ ಜೈಲರ್. ಇದು ಶಿವಣ್ಣನ 2ನೇ ತಮಿಳು ಸಿನಿಮಾ ಕೂಡ ಹೌದು. ರಜನಿಕಾಂತ್ ಅಳಿಯ ಧನುಷ್ ಜೊತೆ ಶಿವಣ್ಣ ಕ್ಯಾಪ್ಟರ್ ಮಿಲ್ಲರ್ ಎನ್ನುವ ಮತ್ತೊಂದು ಸಿನಿಮಾದಲ್ಲಿ ನಟಿಸಿದ್ದಾರೆ. ಆ ಸಿನಿಮಾದ ಶೂಟಿಂಗ್ ಕೂಡ ಮುಗಿದಿದೆ. ಎರಡು ತಮಿಳು ಸಿನಿಮಾದಲ್ಲಿ ಶಿವಣ್ಣ ಏಕಕಾಲದಲ್ಲಿ ನಟಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

 

ಜೈಲರ್ ಸಿನಿಮಾದ ವಿಶೇಷತೆ ಅಂದರೆ, ಕರ್ನಾಟಕದಲ್ಲೂ ಈ ಚಿತ್ರವನ್ನು ಶೂಟ್ ಮಾಡಲಾಗಿದೆ. ಮೈಸೂರು, ಮಂಗಳೂರು ಸೇರಿದಂತೆ ಹಲವು ಕಡೆ ಚಿತ್ರೀಕರಣ ನಡೆಸಿರುವ ಚಿತ್ರತಂಡ, ಕರ್ನಾಟಕದ ಕಥೆಯನ್ನೂ ಈ ಸಿನಿಮಾ ಹೊಂದಿದೆ ಎಂದು ಹೇಳಲಾಗುತ್ತಿದೆ. ಆದರೆ, ಅಧಿಕೃತವಾಗಿ ಚಿತ್ರತಂಡ ಈ ಕುರಿತು ಯಾವುದೇ ಮಾಹಿತಿಯನ್ನೂ ನೀಡಿಲ್ಲ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್