ಕಾಲಿವುಡ್ ನಟ ವಿಶಾಲ್ (Vishal) ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ‘ಯೋಗಿದ’ ಚಿತ್ರದ ನಟಿ ಸಾಯಿ ಧನ್ಶಿಕಾ (Sai Dhanshika) ಜೊತೆ ಹಸೆಮಣೆ (Wedding) ಏರಲು ಸಜ್ಜಾಗಿದ್ದಾರೆ. ಈ ಮದುವೆ ಬಗ್ಗೆ ಅಧಿಕೃತವಾಗಿ ಧನ್ಶಿಕಾ, ವಿಶಾಲ್ ಇಬ್ಬರೂ ಅನೌನ್ಸ್ ಮಾಡಿದ್ದಾರೆ. ಆಗಸ್ಟ್‌ನಲ್ಲಿ ಮದುವೆ ಆಗೋದಾಗಿ ಸಿಹಿಸುದ್ದಿ ಕೊಟ್ಟಿದ್ದಾರೆ. ಇದನ್ನೂ ಓದಿ:War 2 Teaser: ಹೃತಿಕ್ ರೋಷನ್ ಮುಂದೆ ವಿಲನ್ ಆಗಿ ಅಬ್ಬರಿಸಿ ಬೊಬ್ಬಿರಿದ ಜ್ಯೂ.ಎನ್‌ಟಿಆರ್

ಬಳಿಕ ಸಾಯಿ ಧನ್ಶಿಕಾ ಮಾತನಾಡಿ, ನಮ್ಮ ಮದುವೆ ವಿಷಯ ಈಗಲೇ ತಿಳಿಸಬಾರದು ಅಂದುಕೊಂಡಿದ್ದೇವು. ಆದರೆ ಸೋಶಿಯಲ್ ಮೀಡಿಯಾದಲ್ಲಿ ಬೆಳಗ್ಗೆಯಿಂದ ನ್ಯೂಸ್ ವೈರಲ್ ಆಗುತ್ತಿದೆ. ಹೀಗಾಗಿ ಈಗಲೇ ಮದುವೆ ದಿನಾಂಕ ಕೂಡ ಘೋಷಣೆ ಮಾಡುತ್ತೇವೆ. ಕಳೆದ 15 ವರ್ಷಗಳಿಂದಲೂ ಇಬ್ಬರ ನಡುವೆ ಒಳ್ಳೆಯ ಸಂಬಂಧ ಇದೆ. ನಡಿಗರ್ ಸಂಘದ ಕಟ್ಟಡ ಆ.15ರಂದು ಉದ್ಘಾಟನೆ ಮಾಡಲು ಪ್ಲ್ಯಾನ್ ಮಾಡಿದ್ದೇವೆ. ಬಳಿಕ ಆಗಸ್ಟ್ 29ರಂದು ಇಬ್ಬರು ಹೊಸ ಜೀವನಕ್ಕೆ ಕಾಲಿಡಲಿದ್ದೇವೆ ಎಂದು ಹೇಳಿದ್ದಾರೆ.

