ಚೆನ್ನೈ: ತಮಿಳುನಾಡಿನ (Tamil Nadu) ಎಐಎಡಿಎಂಕೆ (AIADMK) ನೇತೃತ್ವದ ಎನ್‌ಡಿಎ (NDA) ಸೀಟು ಹಂಚಿಕೆಯನ್ನು ಅಂತಿಮಗೊಳಿಸಿದೆ.
ಬಿಜೆಪಿ 27, ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಗೆ 18 ಮತ್ತು ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ (ಎಎಂಎಂಕೆ) ಗೆ 11 ಸ್ಥಾನಗಳನ್ನು ಹಂಚಿಕೆ ಮಾಡಿದೆ.
ಒಟ್ಟು 234 ವಿಧಾನಸಭಾ ಕ್ಷೇತ್ರಗಳ ಪೈಕಿ 56 ಸ್ಥಾನಗಳನ್ನು ಮಿತ್ರ ಪಕ್ಷಗಳಿಗೆ 56 ಸ್ಥಾನಗಳನ್ನು ನೀಡಿರುವ ಎಐಎಡಿಎಂಕೆ 178 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದೆ. ಇದನ್ನೂ ಓದಿ: ಕುಟುಂಬ ರಾಜಕಾರಣ ಬೆಂಬಲಿಸಲ್ಲ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ – ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಬಳಿಕ ಸಿಎಂ ಮಾತು
தமிழ்நாட்டின் உணர்வுகளைப் புரிந்து,
தமிழக மக்களின் எண்ணங்களை ஈடேற்றி,
மக்களைக் காத்து, தமிழகத்தை மீட்கப் போகும் நம் @AIADMKOfficial தலைமையிலான தேசிய ஜனநாயகக் கூட்டணியில் உள்ள கட்சிகளின் தலைவர்கள் நம் தலைமைக் கழகம் புரட்சித் தலைவர் எம்ஜிஆர் மாளிகையில் சந்தித்து நடத்திய… pic.twitter.com/2Xg52QTlyg— Edappadi K Palaniswami-SayYEStoWomenSafety&AIADMK (@EPSTamilNadu) March 23, 2026
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರು ಚೆನ್ನೈನಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಸೀಟು ಹಂಚಿಕೆಯನ್ನು ಅಧಿಕೃತವಾಗಿ ತಿಳಿಸಿದರು.
ಬಿಜೆಪಿ ನಾಯಕ ಪಿಯೂಷ್ ಗೋಯಲ್, ಪಿಎಂಕೆ ನಾಯಕ ಅನ್ಬುಮಣಿ ರಾಮದಾಸ್ ಮತ್ತು ಎಎಂಎಂಕೆ ಮುಖ್ಯಸ್ಥ ಟಿಟಿವಿ ದಿನಕರನ್ ಸೇರಿದಂತೆ ಮೈತ್ರಿ ಪಕ್ಷಗಳ ಹಿರಿಯ ನಾಯಕರು ಉಪಸ್ಥಿತಿಯಲ್ಲಿದ್ದರು.

