ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಯಾರಿಗೆಲ್ಲ ಆಹ್ವಾನ? – ಇಲ್ಲಿದೆ ಲಿಸ್ಟ್..

Public TV
1 Min Read

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ರಚನೆಯಾಗುವ ನೂತನ ಸರ್ಕಾರದ ಪ್ರಮಾಣ ವಚನ ಸಮಾರಂಭ ಕಾರ್ಯಕ್ರಮ ಮೇ 20 ರಂದು ನಡೆಯಲಿದೆ. ಸಿದ್ದರಾಮಯ್ಯ ಅವರು 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಂದು ಸಮಾರಂಭಕ್ಕೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಅತಿಗಣ್ಯ ಮತ್ತು ಇತರೆ ಗಣ್ಯವ್ಯಕ್ತಿಗಳಿಗೆ ಆಗಮಿಸಲಿದ್ದಾರೆ.

ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸಗಢದ ಮುಖ್ಯಮಂತ್ರಿ ಭೂಪೇಶ್ ಬಗೇಲ್, ಬಿಹಾರ್‌ ಸಿಎಂ ನಿತೀಶ್ ಕುಮಾರ್, ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್‌ ಸುಖು, ಪುದಿಚೆರಿ ಸಿಎಂ ಎನ್.ರಂಗಸ್ವಾಮಿ, ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೆನ್‌ ಅವರನ್ನು ಆಹ್ವಾನಿಸಲಾಗಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ವಿಪಕ್ಷಗಳ ಒಗ್ಗಟ್ಟಿನ ಬಲ ಪ್ರದರ್ಶನಕ್ಕೆ ಕರ್ನಾಟಕದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕರ್ನಾಟಕ ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಅದ್ಧೂರಿಯಾಗಿ ಆಯೋಜಿಸಲು ತಯಾರಿ ನಡೆಸಲಾಗಿದೆ.

Share This Article