Dilli Babu: ಕಾಲಿವುಡ್‌ ಖ್ಯಾತ ನಿರ್ಮಾಪಕ ನಿಧನ

Public TV
1 Min Read

ಸೂಪರ್ ಹಿಟ್ ಚಿತ್ರ ಸಿನಿಮಾಗಳಿಗೆ ಬಂಡವಾಳ ಹಾಕಿದ್ದ ತಮಿಳಿನ ಖ್ಯಾತ ನಿರ್ಮಾಪಕ (Tamil Producer) ದಿಲ್ಲಿ ಬಾಬು (Dilli Babu) ಅವರು ಸೋಮವಾರ (ಸೆ.9) ನಿಧನರಾಗಿದ್ದಾರೆ.

ಕುಟುಂಬದ ಮೂಲಗಳ ಪ್ರಕಾರ, ಮಧ್ಯರಾತ್ರಿ 12:30ಕ್ಕೆ ಆಸ್ಪತ್ರೆಯಲ್ಲಿ ನಿರ್ಮಾಪಕ ಕೊನೆಯುಸಿರೆಳೆದಿದ್ದಾರೆ. ಇಂದೇ ದಿಲ್ಲಿ ಬಾಬು ಅವರ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ:ಚಾರ್ಜ್‌ಶೀಟ್‌ನಲ್ಲಿ ಗೌಪ್ಯ ಮಾಹಿತಿ ಪ್ರಸಾರಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಿ: ಕೋರ್ಟ್‌ ಮೊರೆ ಹೋದ ದರ್ಶನ್‌

ಇನ್ನೂ ದಿಲ್ಲಿ ಬಾಬುಗೆ 50 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನೂ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಚೆನ್ನೈನ ಪೆರಂಗಳದೂರ್‌ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಅಂದಹಾಗೆ, ರಾಕ್ಷಸನ್, ಓ ಮೈ ಕಡವಲೆ, ಬ್ಯಾಚುಲರ್ ಸೇರಿ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ಅವರು ನಿರ್ಮಿಸಿದ್ದರು.

Share This Article