ಸುಟ್ಟು ಪುಡಿ ಪುಡಿಯಾಗಿ, ಬೂದಿನೂ ಸಿಗದಿರುವಷ್ಟು ಕ್ರೂರಿ ಆಗಿಬಿಡ್ತೀನಿ- ಕಾರ್ತಿಕ್‌ಗೆ ತನಿಷಾ ವಾರ್ನಿಂಗ್

Public TV
1 Min Read

ಸಂಕ್ರಾಂತಿ ಸಂಭ್ರಮಕ್ಕೆ ನೋ ಎಲಿಮಿನೇಷನ್ ಸಿಹಿ ಕೊಟ್ಟಿರುವ ಬಿಗ್‌ಬಾಸ್, ಹೊಸ ವಾರಕ್ಕೆ ಸ್ಪರ್ಧಿಗಳಿಗೆ ಹೊಸ ಹೊಸ ಟಾಸ್ಕ್‌ಗಳನ್ನು ನೀಡುತ್ತಿದ್ದಾರೆ. ಸದಸ್ಯರ ನಡುವಿನ ಸ್ಪರ್ಧೆಯ ತುರುಸನ್ನು ಹೆಚ್ಚಿಸುವ ಬೆಂಕಿ ಚಟುವಟಿಕೆಯೊಂದು ಮನೆಯೊಳಗೆ ನಡೆದಿದೆ. ಜಿಯೋ ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಅದರ ಝಲಕ್ ತೋರಿಸಲಾಗಿದೆ. ಇದನ್ನೂ ಓದಿ:ದೈವ ಸನ್ನಿಧಿಯಲ್ಲಿ ರಿಷಬ್ ಶೆಟ್ಟಿ- ಕೋಲದ ವಿಡಿಯೋ ಹಂಚಿಕೊಂಡ ‘ಕಾಂತಾರ’ ನಟ

ಈ ವಾರದ ನಾಮಿನೇಷನ್‌ನಲ್ಲಿ ನಿಮ್ಮೊಳಗಿರುವ ಗೆಲುವಿನ ಕಿಚ್ಚಿಗೆ ಇಬ್ಬರು ಸದಸ್ಯರು ಬಲಿಯಾಗಬೇಕು ಎಂದು ಹೇಳಿದ್ದಾರೆ. ಎದುರಿಗೆ ಧಗದಹಿಸಿ ಉರಿಯುತ್ತಿರುವ ಬೆಂಕಿಗೆ ತಾವು ಇಚ್ಛಿಸಿರುವ ಇಬ್ಬರು ಸದಸ್ಯರ ಫೊಟೊಗಳನ್ನು ಹಾಕಬೇಕು. ಮನೆಯೊಳಗೇ ರೂಪುಗೊಂಡಿರುವ ಬಾಂಧವ್ಯವೆಲ್ಲವೂ ಈ ಬೆಂಕಿಯಲ್ಲಿ ಹಾದು ಬಣ್ಣ ಬದಲಿಸಿಕೊಳ್ಳುತ್ತಿವೆ. ಕೆಲವು ಉರಿದು ಬೂದಿಯಾಗುತ್ತಿವೆ. ಕೆಲವು ಕರಕಲಾಗುತ್ತಿವೆ. ಯಾವುದಾದರೂ ಬೆಂಕಿಯಲ್ಲಿ ಬೆಂದು ಅಪ್ಪಟ ಚಿನ್ನವಾಗಿ ಹೊರಬರಲಿವೆಯೇ ಎಂದು ಕಾದು ನೋಡಬೇಕಿದೆ.

ಸಂಗೀತಾ(Sangeetha Sringeri), ಪ್ರತಾಪ್ ಅವರ ಫೋಟೊವನ್ನು ಬೆಂಕಿಗೆ ಎಸೆದಿದ್ದಾರೆ. ನಾನು ಇದುವರೆಗೆ ನೋಡಿರುವ ಪ್ರತಾಪ್ ಬೇರೆಯೇ, ಈಗ ನೋಡ್ತಿರೋ ಪ್ರತಾಪ್ (Prathap) ಬೇರೆಯೇ. ಹಾಗಾಗಿ ಅವರನ್ನು ನಾಮಿನೇಟ್ ಮಾಡುತ್ತೇನೆ ಎಂದು ಸಂಗೀತಾ ವಿವರಣೆ ನೀಡಿದ್ದಾರೆ. ತುಕಾಲಿ ಸಂತೋಷ್ ಮತ್ತು ತನಿಷಾ ಇಬ್ಬರೂ ಕಾರ್ತಿಕ್ ಅವರನ್ನು ನಾಮಿನೇಟ್ ಮಾಡಿದ್ದಾರೆ.

ತನಿಷಾ, ಕಾರ್ತಿಕ್ (Karthik Mahesh) ಫೋಟೊವನ್ನು ಹರಿದು ಬೆಂಕಿಗೆ ಎಸೆದಿದ್ದಾರೆ. ಹೇಳುವಂಥ ಮಾತು ಉಳಿಸಿಕೊಳ್ಳಕ್ಕಾಗಲ್ಲ. ಹಾರ್ಟಿಗೆ ಚುಚ್ಚಿದ್ರೆ ನಾನು ಡೈರೆಕ್ಟ್ ಬೆಂಕಿಗೇ ಹಾಕ್ತೀನಿ. ಸುಟ್ಟು ಪುಡಿಪುಡಿಯಾಗಿ, ಬೂದಿನೂ ಸಿಗದಿರುವಷ್ಟು ಕ್ರೂರ ಆಗಿಬಿಡ್ತೀನಿ ಎಂದು ಕಾರ್ತಿಕ್‌ಗೆ ಖಡಕ್ಕಾಗಿ ತನಿಷಾ (Tanisha Kuppanda) ಹೇಳಿದ್ದಾರೆ. ಬಿಗ್‌ಬಾಸ್ ಷೋ ಅಂತಿಮ ಹಂತದಲ್ಲಿನ ಈ ಸಂದರ್ಭದಲ್ಲಿ ಮನೆಯೊಳಗಿನ ಸದಸ್ಯರ ನಡುವಿನ ಸ್ಪರ್ಧೆಯೂ ಅಷ್ಟೇ ತುರುಸಿನದಾಗಿರುತ್ತದೆ. ಕಳೆದ ವಾರ ಬೆಸ್ಟ್ ಪರ್ಫಾರ್ಮೆನ್ಸ್ ನೀಡಿದ್ದ ಸ್ಪರ್ಧಿಗಳೆಲ್ಲ ಈ ವಾರ ಅದನ್ನು ಮುಂದುವರಿಸುತ್ತಾರಾ? ಕಾದು ನೋಡಬೇಕು.

Share This Article