ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ಪೆಟ್ರೋಲ್‌ ಟ್ಯಾಂಕರ್‌ ಪಲ್ಟಿ – ತಪ್ಪಿದ ಭಾರೀ ಅನಾಹುತ

Public TV
1 Min Read

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್‌ ತುಂಬಿದ್ದ ಟ್ಯಾಂಕರ್‌ (Petrol Tanker) ಪಲ್ಟಿಯಾದ ಘಟನೆ ಎಲೆಕ್ಟ್ರಾನಿಕ್‌ ಸಿಟಿಯಲ್ಲಿ (Electronic City) ಇಂದು ಬೆಳಗ್ಗೆ ನಡೆದಿದೆ.

ಮಂಗಳೂರಿನಿಂದ (Mangaluru) ಅತ್ತಿಬೆಲೆಗೆ ಬರುತ್ತಿದ್ದ ಟ್ಯಾಂಕರ್‌ ಎಲೆಕ್ಟ್ರಾನಿಕ್ ಸಿಟಿ ಟೋಲ್ ಬಳಿ ಹೆದ್ದಾರಿಯಲ್ಲಿದ್ದ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಟ್ಯಾಂಕರ್ ಮಗುಚಿ ಬೀಳುತ್ತಿದ್ದಂತೆ ಭಾರೀ ಪ್ರಮಾಣದಲ್ಲಿ ಪೆಟ್ರೋಲ್ (Petrol) ಸೋರಿಕೆಯಾಗಿದೆ.  ಇದನ್ನೂ ಓದಿ: ಗಂಡನೊಂದಿಗೆ ಗಲಾಟೆ – ಕೋಪದಲ್ಲಿ ಮಗನನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ

ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಕ್ರೇನ್‌ ಬಳಸಿ ಟ್ಯಾಂಕರ್‌ ಟ್ಯಾಂಕರ್ ಅನ್ನು ಕ್ರೇನ್‌ ಮೂಲಕ ಮೇಲೆತ್ತಲಾಗಿದೆ. ಇದನ್ನೂ ಓದಿ: ಆ ಯುವತಿ ನಂಬರ್‌ಗೆ ದಿನಕ್ಕೆರಡು ಬಾರಿ ಕರೆ ಮಾಡ್ತಿದ್ದಾರಂತೆ ಪ್ರಜ್ವಲ್ – ರಹಸ್ಯ ಸ್ಫೋಟ!

ಹೊಸೂರು-ಬೆಂಗಳೂರು (Hosuru-Bengaluru) ಹೆದ್ದಾರಿಯಲ್ಲಿ ಈ ಘಟನೆ ನಡೆದ ಕಾರಣ ಹಲವು ಸಮಯದರೆಗೆ ಫುಲ್‌ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಸಂಭವಿಸಿತ್ತು.

 

Share This Article